ಕರ್ನಾಟಕ

karnataka

ETV Bharat / entertainment

'ಒಂದು ಸರಳ ಪ್ರೇಮಕಥೆ'ಯಲ್ಲಿ ಮಗನೊಂದಿಗೆ ತೆರೆ ಹಂಚಿಕೊಂಡ ರಾಘವೇಂದ್ರ ರಾಜ್​ಕುಮಾರ್​ - ಈಟಿವಿ ಭಾರತ ಕನ್ನಡ

Ondu Sarala Premakathe: ಸಿಂಪಲ್​ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮಕಥೆ' ಸಿನಿಮಾದಲ್ಲಿ ಮಗ ವಿನಯ್​ ಜೊತೆ ರಾಘವೇಂದ್ರ ರಾಜ್​ಕುಮಾರ್​ ನಟಿಸಿದ್ದಾರೆ.

Raghavendra Rajkumar shared the screen with his son in ondu sarala premakathe
'ಒಂದು ಸರಳ ಪ್ರೇಮಕಥೆ'ಯಲ್ಲಿ ಮಗನೊಂದಿಗೆ ತೆರೆ ಹಂಚಿಕೊಂಡ ರಾಘವೇಂದ್ರ ರಾಜ್​ಕುಮಾರ್​

By ETV Bharat Karnataka Team

Published : Nov 4, 2023, 4:09 PM IST

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪು ಮೂಡಿಸಿರುವ ನಿರ್ದೇಶಕ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್​ಕುಮಾರ್ ಕಾಂಬೋದಲ್ಲಿ ಮೂಡಿಬರುತ್ತಿರುವ ಸಿನಿಮಾ 'ಒಂದು ಸರಳ ಪ್ರೇಮಕಥೆ'. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಇತ್ತೀಚೆಗೆ ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಒಡೆದಿದೆ. ವಿಶೇಷ ಅಂದ್ರೆ, ಚಿತ್ರದಲ್ಲಿ ವಿನಯ್​ ತಂದೆ ರಾಘವೇಂದ್ರ ರಾಜ್​ಕುಮಾರ್​ ನಟಿಸಿದ್ದಾರೆ.

'ಒಂದು ಸರಳ ಪ್ರೇಮಕಥೆ'

ಸಿನಿಮಾ ಬಗ್ಗೆ ಕೆಲ ಮಾಹಿತಿ ಹಂಚಿಕೊಂಡ ನಿರ್ದೇಶಕ ಸುನಿ, "ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮ ಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ. ಒಟ್ಟು ಸಿನಿಮಾದಲ್ಲಿ 11 ಸಾಂಗ್ಸ್​ ಇವೆ. ಎಲ್ಲ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದ್ರೆ, ಮೊದಲ ದಿನ ವಿನಯ್​ ಸರ್​ಗೆ ಆ್ಯಕ್ಷನ್​ ಕಟ್​ ಹೇಳಿದೆ. ಕೊನೆಯ ದಿನ ರಾಘಣ್ಣ ಅವರ ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ಥಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ" ಎಂದು ತಿಳಿಸಿದರು.

ಬಳಿಕ ರಾಘವೇಂದ್ರ ರಾಜ್​ಕುಮಾರ್ ಮಾತನಾಡಿ, "ಸಿಂಪಲ್ಲಾಗೊಂದು ಲವ್ ಸ್ಟೋರಿ ಸಿನಿಮಾ ನೋಡಿದ ನಂತರ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದಾನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನದೂ ಒಂದು ಸ್ವರವಾಗಿ ಸೇರಿಸಿಕೊಂಡಿದೆ. ಅದು ನನಗೆ ಸಂತೋಷ ಕೊಡುತ್ತದೆ. ಕುಂಬಳಕಾಯಿ ಒಡೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಚೆನ್ನಾಗಿ ಆಗಲಿ. ಸಿನಿಮಾ ನಿಮ್ಮ ಮುಂದೆ ಬರಲಿ" ಎಂದರು.

ಇದನ್ನೂ ಓದಿ:ಡಾರ್ಲಿಂಗ್ ಕೃಷ್ಣರ 'ಶುಗರ್ ಫ್ಯಾಕ್ಟರಿ': ಭಾವನೆ ಬಿಂಬಿಸುವ 'ಹಣೆಯಬರಹ' ಗೀತೆಗೆ ಮೆಚ್ಚುಗೆ

"ಒಂದು ಸರಳ ಪ್ರೇಮಕಥೆ..ಈ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್ ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಲು ಖುಷಿ ಕೊಡ್ತು. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬಾ ಕಂಪರ್ಟ್ ಫೀಲ್ ಕೊಡ್ತಾರೆ. ಆ್ಯಕ್ಟಿಂಗ್ ಮಾಡಲು ಟ್ರೈ ಮಾಡುವುದು ಬೇಡ. ಅದು ತಾನಾಗಿಯೇ ಬರುತ್ತದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲಾ ಕಲಾವಿದರ ಅದ್ಭುತವಾಗಿ ನಟಿಸಿದ್ದಾರೆ" - ವಿನಯ್ ರಾಜ್​ಕುಮಾರ್, ನಟ

"ನನ್ನ ಸಿನಿಮಾ ಕರಿಯರ್​ನ ಅತ್ಯಂತ ಉತ್ಕೃಷ್ಟ ಮ್ಯೂಸಿಕ್ ಸಂಗೀತ ಸಿನಿಮಾ ಒಂದು ಸರಳ ಪ್ರೇಮ ಕಥೆ. ನನ್ನ ಎರಡನೇ ಸಿನಿಮಾದಲ್ಲಿ 10 ಹಾಡುಗಳಿದ್ದವು. ತುಂಬಾ ದೊಡ್ಡ ಹೆಸರು ತಂದುಕೊಟ್ಟಿತ್ತು. ಆ ನಂತರ ಯೋಗರಾಜ್ ಭಟ್ ಅವರ ಪ್ರೊಡಕ್ಷನ್​ನಲ್ಲಿ ದೇವ್ರೇ ಅಂತಾ ಮಾಡಿದ್ದೆ. ಅದು ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಈ ಸಿನಿಮಾ ಆ ಎರಡು ಸಿನಿಮಾಗಳನ್ನು ಈ ಚಿತ್ರ ಮೀರಿಸುತ್ತದೆ ಅನಿಸುತ್ತಿದೆ. ಯಾಕೆಂದರೆ, ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್ ಜೊತೆ ಕನೆಕ್ಟ್ ಆಗುತ್ತದೆ" - ವೀರ್ ಸಮರ್ಥ್, ಸಂಗೀತ ನಿರ್ದೇಶಕ

"ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ" - ಮೈಸೂರು ರಮೇಶ್, ನಿರ್ಮಾಪಕ

ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಜೋಡಿಯಾಗಿ ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸಿದ್ದಾರೆ. ಇವರ ಜೊತೆ ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾ ಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ. ಕಾರ್ತಿಕ್ ಕ್ಯಾಮರಾ ಹಿಡಿದಿದ್ದಾರೆ. ಸದ್ಯ ಚಿತ್ರೀಕರಣ ಮುಗಿಸಿದ ಒಂದು ಸರಳ ಪ್ರೇಮಕಥೆ ಚಿತ್ರ ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ:'ಹಾಯ್​ ನಾನ್ನ' ಚಿತ್ರದ ರೊಮ್ಯಾಂಟಿಕ್​ ಹಾಡು ಬಿಡುಗಡೆ; ನಾನಿ-ಮೃಣಾಲ್​ ಕೆಮಿಸ್ಟ್ರಿ ಸೂಪರ್​

ABOUT THE AUTHOR

...view details