ಚಾಮರಾಜನಗರ: ಚಿಕ್ಕ ತಿರುಪತಿ ಎಂದೇ ಕರೆಯಲ್ಪಡುವ ಹನೂರು ತಾಲೂಕಿನ ಸಿಂಗಾನಲ್ಲೂರು ಸಮೀಪದ ಬೂದುಬಾಳು ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಇಂದು ಅಣ್ಣಾವ್ರ ಕುಟುಂಬ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್ ಸೇರಿದಂತೆ ಮನೆ ಮಂದಿ ಮನೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸೇವಿಸಿದ್ದಾರೆ.
ಶಿವ ರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಮೂವರು ಒಟ್ಟಾಗಿ ಈ ದೇವಾಲಯಕ್ಕೆ ಬರಲು ದಿನಾಂಕ ನಿಗದಿಯಾಗಿತ್ತು. ಆದರೆ, ಅಷ್ಟರಲ್ಲಾಗಲೇ ಪುನೀತ್ ರಾಜ್ಕುಮಾರ್ ಕೊನೆಯುಸಿರೆಳೆದರು. ಅಪ್ಪು ನಿಧನರಾಗಿ ಒಂದು ವರ್ಷದ ನಂತರ ಈಗ ಮನೆ ಮಂದಿ ಬಂದು ಮನೆ ದೇವರ ದರ್ಶನ ಪಡೆದಿದ್ದಾರೆ. ದೇವಾಲಯ ಕಂಡು ಎಲ್ಲರೂ ಸಂತಸ ಪಟ್ಟರು ಎಂದು ದೇವಾಲಯದ ಅರ್ಚಕರು ಮಾಹಿತಿ ನೀಡಿದ್ದಾರೆ.