ಮಂಬೈ:ಮಿಸ್ಟರ್ ಆ್ಯಂಡ್ ಮಿಸಸ್ ಮಹಿ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಹೇಳಿಕೊಂಡಿದೆ. 2021ರಲ್ಲಿ ತೆರೆಕಂಡಿದ್ದ ರೂಹಿ ಸಿನಿಮಾದ ಸಹ ನಟರಾದ ರಾಜ್‌ಕುಮಾರ್ ರಾವ್ ಮತ್ತು ಜಾಹ್ನವಿ ಕಪೂರ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಧರ್ಮ ಪ್ರೊಡಕ್ಷನ್ಸ್ ತನ್ನ ಟ್ವಿಟರ್ನಲ್ಲಿ ಚಿತ್ರೀಕರಣ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.
'ಫೀಲ್ಡ್ ಸಿದ್ಧವಾಗಿದೆ ಮತ್ತು ಮಿಸ್ಟರ್ ಆ್ಯಂಡ್ ಮಿಸಸ್ ಮಹಿ ತಂಡವು ಸಜ್ಜಾಗಿದೆ! ಮೊದಲನೇ ದಿನದ ಶೂಟಿಂಗ್ ಪ್ರಾರಂಭವಾಗುತ್ತದೆ!' ಎಂದು ಪ್ರೊಡಕ್ಷನ್ ಬ್ಯಾನರ್ ಟ್ವೀಟ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಸಿನಿಮಾದಲ್ಲಿ ರಾವ್ ಮತ್ತು ಕಪೂರ್ ಮಹೇಂದ್ರ ಮತ್ತು ಮಹಿಮಾ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.