ಕ್ರಿಕೆಟ್ ಕ್ಷೇತ್ರದಲ್ಲಿ ದಾಖಲೆ ನಿರ್ಮಿಸಿದ ಆಲ್ರೌಂಡರ್ ದೀಪ್ತಿ ಶರ್ಮಾ ಅವರನ್ನು ನಟಿ ರಾಕುಲ್ ಪ್ರೀತ್ ಸಿಂಗ್ ಶ್ಲಾಘಿಸಿದ್ದಾರೆ. ದೀಪ್ತಿ ಶರ್ಮಾ 100 ಟಿ20 ವಿಕೆಟ್ಗಳನ್ನು ಪಡೆದ ಮೊದಲ ಭಾರತೀಯ ಕ್ರಿಕೆಟಿಗರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಪಾಕಿಸ್ತಾನದ ಎದುರು ಗೆಲುವು ಕಂಡ ಭಾರತೀಯ ವನಿತೆಯರು ವೆಸ್ಟ್ ಇಂಡೀಸ್ ಎದುರು ಕಣಕ್ಕಿಳಿದು ವಿಜೇತರಾಗಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್ ಮಹಿಳೆಯರನ್ನು 118 ರನ್ಗೆ ಭಾರತೀಯ ಮಹಿಳಾ ಕ್ರಿಕೆಟಿಗರು ಸೋಲಿಸಿದ್ದಾರೆ. ಈ ಪಂದ್ಯದಲ್ಲಿ ಮೂರು ವಿಕೆಟ್ ಪಡೆದ ದೀಪ್ತಿ ಶರ್ಮಾ ಅವರು ಟಿ20 ವಿಭಾಗದಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಈ ಸಾಧನೆ ಮೆಚ್ಚಿದ ನಟಿ ರಾಕುಲ್ ಪ್ರೀತ್ ಸಿಂಗ್ ಅವರು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಆಲ್ರೌಂಡರ್ ದೀಪ್ತಿ ಶರ್ಮಾ ಅವರ ಫೋಟೋ ಹಂಚಿಕೊಂಡು ಮೆಚ್ಚುಗೆ ಸೂಚಿಸಿದ್ದಾರೆ. ಈ ಸ್ಟೋರಿಗೆ ಈ ಇಬ್ಬರು ಸಾಧಕರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ವನಿತೆಯರ ಟಿ20 ವಿಶ್ವಕಪ್ನ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿದೆ. ಭಾರತದ ವನಿತೆಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.
ವೆಸ್ಟ್ ಇಂಡೀಸ್ ತಂಡ 6 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಕನಿಷ್ಠ ಮೊತ್ತಕ್ಕೆ ಕುಸಿತಗೊಂಡಿತು. ಸಾಧಾರಣ ಮೊತ್ತವನ್ನು ಬೆನ್ನು ಹತ್ತಿದ್ದ ಭಾರತೀಯ ವನಿತೆಯರ ತಂಡ ಮತ್ತೊಮ್ಮ 6 ವಿಕೆಟ್ಗಳ ಮೂಲಕ ಗೆಲುವು ಸಾಧಿಸಿದರು. ರಿಚಾ ಘೋಷ್ 44ರನ್ ಗಳಿಸಿದರು. ಪಂದ್ಯದಲ್ಲಿ ಮೂರು ವಿಕೆಟ್ ಪಡೆದು ಅಂತಾರಾಷ್ಟ್ರೀಯ ಟಿ-20 ಯಲ್ಲಿ ಶತಕ ಔಟ್ಗಳನ್ನು ಮಾಡಿದ ದೀಪ್ತಿ ಶರ್ಮಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಪಾಕಿಸ್ತಾನದ ವಿರುದ್ಧ ಜಯ ಸಾಧಿಸಿದ್ದ ಭಾರತದ ಮಹಿಳಾ ತಂಡ ಅದೇ ಕ್ರೀಡಾಂಗಣದಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದಲ್ಲಿ ಮತ್ತೊಂದು ಜಯ ಸಾಧಿಸಿತು.