ಕನ್ನಡತಿ ರಶ್ಮಿಕಾ ಮಂದಣ್ಣ ಬಹು ಭಾಷೆ ತಾರೆಯಾಗಿ ಮಿಂಚುತ್ತಿದ್ದಾರೆ. ಸಾಕಷ್ಟು ಟೀಕೆ, ಟ್ರೋಲ್ ಎದುರಿಸಿದರೂ ನ್ಯಾಷನಲ್ ಕ್ರಶ್ ಕ್ರೇಜ್ ಕಿಂಚಿತ್ತೂ ಕಮ್ಮಿ ಆಗಿಲ್ಲ. ಬಹು ಭಾಷಾ ನಟಿಯ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಶ್ಮಿಕಾ ಅವರು ಸದ್ಯ ತೆಲುಗು, ತಮಿಳು ಜೊತೆಗೆ ಹಿಂದಿಯಲ್ಲೂ ಜನಪ್ರಿಯ ನಾಯಕ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸೌಂದರ್ಯ ಮತ್ತು ನಟನೆಗೆ ಸಿನಿಪ್ರೇಮಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಸದ್ಯ ಅಪರೂಪದ ಸಾಧನೆ ಮಾಡಿದ್ದಾರೆ. IMDb ಪ್ರಕಟಿಸಿದ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಟಿ ರಶ್ಮಿಕಾ ಮಂದಣ್ಣ ಮೂರನೇ ಸ್ಥಾನದಲ್ಲಿದ್ದಾರೆ.
IMDB ಪಟ್ಟಿಯಲ್ಲಿ ರಶ್ಮಿಕಾ ಮೂರನೇ ಸ್ಥಾನ ಪಡೆದಿದ್ದಾರೆ. ಈ ತಿಂಗಳ ಆರಂಭದಲ್ಲಿ ರಶ್ಮಿಕಾ ಅವರ ಹುಟ್ಟುಹಬ್ಬ ಮತ್ತು ಪುಷ್ಪ 2 ಟೀಸರ್ ಬಿಡುಗಡೆಯಾದ ಕಾರಣ ಇಂಟರ್ನೆಟ್‌ನಲ್ಲಿ ಹೆಚ್ಚು ಸದ್ದು ಮಾಡಿದ ಸೆಲೆಬ್ರಿಟಿಗಳಲ್ಲಿ ಒಬ್ಬರಾದರು. ಇದರೊಂದಿಗೆ, ಅವರು ಅತ್ಯಂತ ಜನಪ್ರಿಯ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡರು. IMDb ತನ್ನ ಟ್ವಿಟರ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಮೂಲಕ ಇದನ್ನು ಪ್ರಕಟಿಸಿದೆ. ನ್ಯಾಷನಲ್ ಕ್ರಶ್ ಈ ಅಪರೂಪದ ಸಾಧನೆ ಮಾಡಿದ್ದು, ಅಭಿಮಾನಿಗಳು ಬಹಳ ಖುಷಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸವನ್ನು ವ್ಯಕ್ತಪಡಿಸುತ್ತಿದ್ದಾರೆ. ನಟಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.
ತಮಿಳು ನಿರ್ದೇಶಕ ವೆಟ್ರಿಮಾರನ್ 11ನೇ ಸ್ಥಾನದಲ್ಲಿದ್ದಾರೆ. ಪುಷ್ಪ ಚಿತ್ರದ ಮೂಲಕ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಾಯಕ ನಟ ಅಲ್ಲು ಅರ್ಜುನ್ 17ನೇ ಸ್ಥಾನದಲ್ಲಿರುವುದು ಗಮನಾರ್ಹ. ಆ ನಂತರ ಮೃಣಾಲ್ ಠಾಕೂರ್ (31), ತಮನ್ನಾ ಭಾಟಿಯಾ (33), ಕರೀನಾ (34), ನಾನಿ (49), ಅಲಯಾ ಎಫ್(26), ಸಾರಾ ಅಲಿ ಖಾನ್(27) ಮತ್ತು ಕೀರ್ತಿ ಸುರೇಶ್ 50ನೇ ಸ್ಥಾನದಲ್ಲಿ ಇದ್ದಾರೆ.