ಕರ್ನಾಟಕ

karnataka

ETV Bharat / entertainment

Rashmika Mandanna: 80 ಲಕ್ಷ ರೂಪಾಯಿ ಮೋಸ ಮಾಡಿದ ಮ್ಯಾನೇಜರ್‌ಗೆ ಗೇಟ್‌ಪಾಸ್ ಕೊಟ್ಟ ರಶ್ಮಿಕಾ ಮಂದಣ್ಣ - ರಶ್ಮಿಕಾ ಮಂದಣ್ಣ ಹಿಂದಿ ಸಿನಿಮಾಗಳು

ನಟಿ ರಶ್ಮಿಕಾ ಮಂದಣ್ಣ ಅವರು ತಮಗೆ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕೆಲಸದಿಂದ ತೆಗೆದುಹಾಕಿ ಮನೆಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Rashmika Mandanna fires long time manager after latter dupes her of Rs 80 lakh
ನಟಿ ರಶ್ಮಿಕಾ ಮಂದಣ್ಣ

By

Published : Jun 19, 2023, 3:25 PM IST

ಹೈದರಾಬಾದ್: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ತಮ್ಮನ್ನು ವಂಚಿಸಿದ ಮ್ಯಾನೇಜರ್​ ಓರ್ವನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಆರೋಪಿ ಮ್ಯಾನೇಜರ್‌ ನಟಿಗೆ 80 ಲಕ್ಷ ರೂ. ಮೋಸ ಮಾಡಿದ್ದಾನೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಆರೋಪಿ ಮ್ಯಾನೇಜರ್​ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ನಟಿಯ ಪ್ರತಿದಿನದ ವ್ಯವಹಾರವನ್ನು ಮ್ಯಾನೇಜರ್‌ ನೋಡಿಕೊಳ್ಳುತ್ತಿದ್ದನು. ಇತ್ತೀಚೆಗೆ ಅಸಲಿ ವಿಚಾರ ಗೊತ್ತಾಗಿದೆ. ರಶ್ಮಿಕಾ ಈವರೆಗೂ ಎಲ್ಲಿಯೂ ಮೋಸ ಹೋದ ವಿಚಾರ ಹೇಳಿಕೊಂಡಿಲ್ಲ. ಈ ಸುದ್ದಿಗೆ ಹೆಚ್ಚು ಪ್ರಾಮುಖ್ಯತೆ ನೀಡದೇ ಅವರು ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಆರೋಪಿ ಹಣವನ್ನು ಮರಳಿ ಕೊಟ್ಟಿರುವ ಬಗ್ಗೆಯೂ ಯಾವುದೇ ಖಚಿತ ಮಾಹಿತಿಗಳಿಲ್ಲ.

ಇತ್ತೀಚೆಗಷ್ಟೇ ಬಿಡುಗಡೆಯಾದ ಮಿಷನ್ ಮಜ್ನು (2023) ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಇದಕ್ಕೂ ಮುನ್ನ ಅಮಿತಾಭ್ ಬಚ್ಚನ್ ಅವರೊಂದಿಗೆ ಗುಡ್​ಬೈ ಚಿತ್ರದಲ್ಲಿ ಅಭಿನಯಿಸಿದ್ದರು. ಇದೀಗ ರಣಬೀರ್ ಕಪೂರ್ ನಟನೆಯ 'ಅನಿಮಲ್' ನಲ್ಲಿ ನಟಿಸುತ್ತಿದ್ದಾರೆ.

ಆ್ಯಕ್ಷನ್ ಚಿತ್ರ ಇದಾಗಿದ್ದು ಕಬೀರ್ ಸಿಂಗ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ. ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಜೊತೆಗೆ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಆಗಸ್ಟ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದಲ್ಲದೇ ಮಂದಣ್ಣ ಬಾಲಿವುಡ್​ನ ಹಲವು ಚಿತ್ರಗಳಲ್ಲಿ ನಟಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುಕುಮಾರ್ ನಿರ್ದೇಶನದ ಮತ್ತು ಅಲ್ಲು ಅರ್ಜುನ್ ನಟನೆಯ 'ಪುಷ್ಪ 2'ರಲ್ಲಿಯೂ ಅವರು ನಟಿಸುತ್ತಿದ್ದಾರೆ. ಇದೂ ಕೂಡ ಈ ವರ್ಷದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದು. ಹಿಂದಿ, ತಮಿಳು, ಮಲಯಾಳಂ, ಮತ್ತು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆಯಾದ 'ಪುಷ್ಪ 1' ಹಣ ಗಳಿಕೆಯಲ್ಲಿ ದಾಖಲೆ ಬರೆದಿದ್ದು 'ಪುಷ್ಪ 2'ರ ಮೇಲೆ ಸಿನಿರಸಿಕರಿಗೆ ಭಾರಿ ನಿರೀಕ್ಷೆ ಇದೆ.

ಇದನ್ನೂ ಓದಿ: ’90 ಬಿಡಿ ಮನೀಗ್ ನಡಿ’.. ನಟ ವೈಜನಾಥ್​ ಬಿರಾದರ್​ರ 500ನೇ ಚಿತ್ರದ ಟ್ರೈಲರ್ ರಿಲೀಸ್.. ಸಿನಿಮಾ ಬಿಡುಗಡೆ ದಿನಾಂಕವೂ ಘೋಷಣೆ

ABOUT THE AUTHOR

...view details