ಕೋqfyM ಕಣ್ಣುಗಳು ಕಾತರತೆಯಿಂದ ಕಾಯುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಆಗಿರುವ ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಕಕ್ಷೆ ಪ್ರವೇಶಿಸಿದೆ. ಇಂದು ಮಧ್ಯಾಹ್ನ 2.35ಕ್ಕೆ ಎಲ್ವಿಎಂ-3 ಎಂ4 ರಾಕೆಟ್ ಆಂಧ್ರಪ್ರದೇಶದ ಸುಳ್ಳೂರುಪೇಟೆಯಲ್ಲಿರುವ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡಿದೆ. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಆ ಸಾಲಿನಲ್ಲಿ ಸಿನಿಮಾ ಸೆಲೆಬ್ರಿಟಿಗಳು ಕೂಡ ಸೇರಿಕೊಂಡಿದ್ದಾರೆ.
ಬಾಲಿವುಡ್ ನಟರಾದ ರವೀನಾ ಟಂಡನ್, ಸೋನು ಸೂದ್, ಅನುಪಮ್ ಖೇರ್ ಮತ್ತು ಇತರರು ತಮ್ಮ ಟ್ವಿಟರ್ ಖಾತೆಯ ಮೂಲಕ ಚಂದ್ರಯಾನ 3 ಮಿಷನ್ಗಾಗಿ ಇಸ್ರೋ ಪರಿಶ್ರಮವನ್ನು ಕೊಂಡಾಡಿದ್ದಾರೆ. ಚಂದ್ರಯಾನ 3 ಯಶಸ್ವಿಯಾದರೆ, ಅಮೆರಿಕ, ರಷ್ಯಾ ಮತ್ತು ಚೀನಾದ ನಂತರ ಭಾರತವು ಚಂದ್ರನ ಮೇಲ್ಮೈಯಲ್ಲಿ ಇಳಿದು ಸವಾರಿ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ.
'ನಮಗೆಲ್ಲರಿಗೂ ಹೆಮ್ಮೆಯ ಕ್ಷಣ..': ಐತಿಹಾಸಿಕ ಸಾಧನೆಯತ್ತ ಮುನ್ನುಗ್ಗುತ್ತಿರುವ ಭಾರತವನ್ನು ಶ್ಲಾಘಿಸಿ ರವೀನಾ ಟಂಡನ್ ಟ್ವೀಟ್ ಮಾಡಿದ್ದಾರೆ. "ನಮಗೆಲ್ಲರಿಗೂ ಹೆಮ್ಮೆಯ ಕ್ಷಣ. ಜೈ ಹಿಂದ್! ಯಶಸ್ವಿ ಉಡಾವಣೆಗಾಗಿ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳಿಗೂ ಅಭಿನಂದನೆಗಳು. #ಚಂದ್ರಯಾನ 3 ಹರ್ ಹರ್ ಮಹಾದೇವ್" ಎಂದು ಬರೆದಿದ್ದಾರೆ. ನಟ ಸೋನ್ ಸೂದ್ ಕೂಡ ಇಸ್ರೋ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. "ಇತಿಹಾಸ ರಚಿಸಲಾಗಿದೆ. ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ" ಎಂದಿದ್ದಾರೆ.
ಇದನ್ನೂ ಓದಿ:'ಕೋಟ್ಯಾಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ': ಚಂದ್ರಯಾನ 3ಗೆ ಶುಭಹಾರೈಸಿದ ಬಾಲಿವುಡ್ ಸೆಲೆಬ್ರಿಟಿಗಳು