ಕನ್ನಡ ಚಿತ್ರರಂಗದಲ್ಲಿ ಗೂಗ್ಲಿ, ರಣವಿಕ್ರಮ, ನಟ ಸಾರ್ವಭೌಮ ಅಂತಹ ಚಿತ್ರಗಳನ್ನು ನಿರ್ದೇಶನ ಮಾಡಿರೋ ಡೈರೆಕ್ಟರ್ ಪವನ್ ಒಡೆಯರ್. ಪವನ್ ಡೈರೆಕ್ಷನ್ನ ನೂತನ ಹಿಂದಿ ಸಿನಿಮಾ ಸೆಟ್ಟೇರಿ ಸಖತ್ ಸುದ್ದಿಯಾಗಿದೆ. ಇನ್ನು ಯುವ ನಟ ಇಶಾನ್ ಜೊತೆ ರೇಮೊ ಎಂಬ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ಮಾಡ್ತಾ ಇರೋದು ಗೊತ್ತಿರುವ ವಿಚಾರ. ಟೈಟಲ್ ಹಾಗೂ ಅದ್ಧೂರಿ ಮೇಕಿಂಗ್ನಿಂದ ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಹುಟ್ಟಿಸಿರೋ ರೇಮೊ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ನಟ ಇಶಾನ್ ಜೊತೆ ನಟಿ ಆಶಿಕಾ ರಂಗನಾಥ್ ರೊಮ್ಯಾನ್ಸ್ ಮಾಡಿದ್ದು, ಇವರಿಬ್ಬರ ಕೆಮಿಸ್ಟ್ರಿ ಸಖತ್ ವರ್ಕ್ ಔಟ್ ಆಗಿದೆ. ಈ ಚಿತ್ರದ ಹೈಲೆಟ್ಸ್ ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಾತನಾಡಿದ್ದು, ನಾನು ಮೊದಲ ಬಾರಿ ಇಶಾನ್ ಅವರನ್ನು ಭೇಟಿ ಮಾಡಿದ್ದು ದುಬೈನಲ್ಲಿ. ಇಷ್ಟು ಚೆನ್ನಾಗಿದ್ದಾರೆ. ಇವರನ್ನು ಹೀರೋ ಮಾಡಬೇಕು ಅಂದುಕೊಂಡೆ. ನಂತರ ರೇಮೊ ಚಿತ್ರದ ಕಥೆ ಬರೆದೆ. 2019ರಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಯಿತು. ಆನಂತರ ಹೈದರಾಬಾದ್, ಜಮ್ಮು-ಕಾಶ್ಮೀರ, ಸೌತ್ ಆಫ್ರಿಕಾ, ಸಿಂಗಾಪುರ ಮುಂತಾದ ಕಡೆ ಚಿತ್ರೀಕರಣ ನಡೆಸಲಾಯಿತು.
ಇದೊಂದು ಮ್ಯೂಸಿಕಲ್ ಲವ್ ಸ್ಟೋರಿ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಅದ್ಭುತ ಹಾಡುಗಳು ಈ ಚಿತ್ರದಲ್ಲಿದೆ. ಇಶಾನ್ - ಆಶಿಕಾ ರಂಗನಾಥ್ ಅವರ ಸುಂದರ ಜೋಡಿಯನ್ನು ತೆರೆ ಮೇಲೆ ನೋಡಿದವರು ಫಿದಾ ಆಗುವುದು ಖಂಡಿತಾ. ವೈದಿ ಅವರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ "ರೇಮೊ" ಚಿತ್ರದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು.