ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿಯೊಂದಿಗೆ ಮಾತುಕತೆ ನಡೆಸುವ ಸಲುವಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟರ್ ಎಬಿ ಡಿ ವಿಲಿಯರ್ಸ್ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಅವರು ಆರ್‌ಸಿಬಿ ತಂಡ ಸೇರಿಕೊಂಡಿರುವುದು ಅಭಿಮಾನಿಗಳಿಗೆ ಸಂತಸ ಉಂಟುಮಾಡಿದೆ. ಮತ್ತೊಂದು ಸಂತೋಷಕರ ವಿಷಯವೆಂದರೆ, ದೇಶಾದ್ಯಂದ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿರುವುದು.
ಹೌದು, ಕಾಂತಾರ ಸಾರಥಿ ರಿಷಬ್ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಒಂದೇ ಫ್ರೇಮ್ನಲ್ಲಿ ಕಾಣಿಸಿಕೊಂಡಿದ್ದು, ಇಬ್ಬರೂ ಕಾಂತಾರ ಎಂದಿದ್ದಾರೆ. ಈ ವಿಡಿಯೋವನ್ನು ಹೊಂಬಾಳೆ ಫಿಲ್ಮ್ಸ್, ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಇವರಿಬ್ಬರನ್ನೂ ಒಂದೇ ಫ್ರೇಮ್ನೊಳಗೆ ನೋಡಿದ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.