ಕರ್ನಾಟಕ

karnataka

ETV Bharat / entertainment

ಹಾಸ್ಯನಟ ಸಾಧುಕೋಕಿಲಗೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸ್ಥಾನ - KPCC

ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಹಾಸ್ಯನಟ ಸಾಧುಕೋಕಿಲ ನೇಮಕಗೊಂಡಿದ್ದಾರೆ.

KPCC cultural unit president Sadhu kokila
ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸಾಧುಕೋಕಿಲ

By

Published : Mar 2, 2023, 5:45 PM IST

Updated : Mar 2, 2023, 6:13 PM IST

ಬೆಂಗಳೂರು: ಚುನಾವಣೆಯ ಹಿನ್ನೆಲೆ, ಹಾಸ್ಯನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರಿಗೆ ರಾಜ್ಯ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರ ಜವಾಬ್ದಾರಿಯನ್ನು ಕೊಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಪಕ್ಷದ ಶಲ್ಯ ಹಾಕಿ, ಹೂಗುಚ್ಛ ನೀಡಿ ಸಾಧುಕೋಕಿಲ ಅವರಿಗೆ ಈ ಜವಾಬ್ದಾರಿ ಕೊಟ್ಟಿದ್ದಾರೆ. ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್​ ಟ್ವೀಟ್: ''ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡ ನಾಡಿನ ಜನಮೆಚ್ಚಿನ ಕಲಾವಿದ ಸಾಧುಕೋಕಿಲ ಅವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇವೆ. ತಮ್ಮ ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ'' ಎಂದು ಕರ್ನಾಟಕ ಕಾಂಗ್ರೆಸ್​ ಟ್ವೀಟ್ ಮಾಡಿದೆ.

ಡಿಕೆಶಿ ಟ್ವೀಟ್: ''ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ, ಶುಭವಾಗಲಿ'' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಸಾಧುಕೋಕಿಲ: ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿರುವ ಹಾಸ್ಯನಟ ಸಾಧುಕೋಕಿಲ ಅವರು ಕಳೆದ ಕೆಲ ದಿನಗಳಿಂಗ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಮೇಕೆದಾಟು ಪಾದಯಾತ್ರೆಯಲ್ಲೂ ಭಾಗಿ ಆಗಿದ್ದರು. ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್​ ವಿಶ್ವಾಸ ಹೆಚ್ಚಾಗಿದೆ.

'ಕೊಟ್ಟ ಕೆಲಸ ಮಾಡುತ್ತೇನೆ': ಹಾಸ್ಯನಟ ಸಾಧುಕೋಕಿಲ ಅವರು ರಾಜ್ಯ ರಾಜಧಾನಿ ಬೆಂಗಳೂರಿನ ಕ್ಷೇತ್ರವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದ ಸಾಧುಕೋಕಿಲ ಅವರು, "ಹಾಗೆಲ್ಲ ಯಾವ ಸುದ್ದಿಯೂ ಇಲ್ಲ. ನಮಗೆ ಯಾವ ಕೆಲಸ ಹೇಳುತ್ತಾರೋ, ಏನು ಕೆಲಸ ಹೇಳುತ್ತಾರೋ ಅದನ್ನು ಮಾಡಿಕೊಂಡು ಹೋದರೆ ಸಾಕು. ನಾವು ಕಲಾವಿದರು" ಎಂದು ತಿಳಿಸಿದ್ದರು.

ಇದನ್ನೂ ಓದಿ:ಮಾಜಿ ವಿಶ್ವ ಸುಂದರಿಗೆ ಹೃದಯಾಘಾತ.. ಎರಡು ದಿನಗಳ ಬಳಿಕ ಬಹಿರಂಗಪಡಿಸಿದ ನಟಿ ಸುಶ್ಮಿತಾ ಸೇನ್

ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದಿತ್ತು. ಈ ಕಾರ್ಯಕ್ರಮದಲ್ಲೂ ಸಾಧುಕೋಕಿಲ ಅವರು ಭಾಗಿಯಾಗಿ ಕಾಂಗ್ರೆಸ್​ ಪರ ಮಾತನಾಡಿದ್ದರು.ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್, ಮರಳುಗಾಡಿನಲ್ಲಿದ್ದ ನಮಗೆ ತೊರೆ, ಕೆರೆ, ನದಿ ದಾಟಿಸಿ ಈಗ ಸಮುದ್ರದ ಬಳಿ ಕಾಂಗ್ರೆಸ್ ತಂದು ನಿಲ್ಲಿಸಿದೆ ಎಂದು ತಿಳಿಸಿದ್ದರು. ಸ್ವಾತಂತ್ರ್ಯ ನಂತರ ಇಷ್ಟು ದಿನ ನಮ್ಮನ್ನು ಕರೆತಂದಿದ್ದು ಕಾಂಗ್ರೆಸ್. ಕಾಂಗ್ರೆಸ್​ಗೆ ಮೋಸ ಮಾಡಿದರೆ ಪೋಷಕರಿಗೆ ಮೋಸ ಮಾಡಿದಂತೆ ಎಂದು ತಿಳಿಸಿದ್ದರು.

ಇದನ್ನೂ ಓದಿ:ಅಮೆರಿಕದಾದ್ಯಂತ ಆರ್​ಆರ್​ಆರ್ ಸದ್ದು: ಪ್ರೇಕ್ಷಕರ ಚಪ್ಪಾಳೆಗೆ ಸಾಕ್ಷಿಯಾದ ಯುಎಸ್​ ಚಿತ್ರಮಂದಿರಗಳು

Last Updated : Mar 2, 2023, 6:13 PM IST

ABOUT THE AUTHOR

...view details