ಕರ್ನಾಟಕ

karnataka

ETV Bharat / entertainment

ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್‌ಗೆ ಎಂಟ್ರಿ? - Sai Pallavi latest news

ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.

Sai Pallavi Bollywood Entry as seethe
ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್‌ಗೆ ಎಂಟ್ರಿ

By

Published : Dec 7, 2022, 5:05 PM IST

Updated : Dec 7, 2022, 5:50 PM IST

ಸೌತ್​ ಸೂಪರ್​ ಸ್ಟಾರ್​ ಸಾಯಿ ಪಲ್ಲವಿ ತಮ್ಮ ಅದ್ಭುತ ಅಭಿನಯದಿಂದ ದೊಡ್ಡ ಹೆಸರು ಮಾಡಿದ್ದಾರೆ. ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಆಯ್ದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರಂತೆ.

ಬಾಲಿವುಡ್​​ ಹೀರೋ ರಣ್​​ಬೀರ್ ಕಪೂರ್ ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.

ಇದನ್ನೂ ಓದಿ:ಬಾಲಿವುಡ್​ ಪ್ರವೇಶಕ್ಕೆ ಸಜ್ಜಾದ ಕಿಂಗ್​ ಖಾನ್​ ಶಾರುಖ್​ ಪುತ್ರ; ತೆರೆ ಹಿಂದೆ ಕೆಲಸ ಮಾಡಲಿರುವ ಆರ್ಯನ್​ ಖಾನ್​

Last Updated : Dec 7, 2022, 5:50 PM IST

ABOUT THE AUTHOR

...view details