ಗ್ಲೋಬಲ್ ಸ್ಟಾರ್ ರಾಮ್‌ಚರಣ್ ನಟನೆಯ 16ನೇ ಸಿನಿಮಾದ ಹೊಸ ಅಪ್ಡೇಟ್ ಹೊರಬಿದ್ದಿದೆ. ಹಳ್ಳಿ ಹಿನ್ನೆಲೆಯಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ 'ಉಪ್ಪೇನ' ಖ್ಯಾತಿಯ ನಿರ್ದೇಶಕ ಬುಚ್ಚಿಬಾಬು ಸನಾ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯ ಸಿನಿಮಾ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಆದರೆ 'RC 16'ಗೆ ನಾಯಕಿ ಯಾರೆಂಬ ಕುತೂಹಲ ಜನರಲ್ಲಿದೆ. ಇಲ್ಲಿಯವರೆಗೆ ಬಾಲಿವುಡ್ ನಟಿ ರವೀನಾ ಟಂಡನ್ ಮಗಳು ರಾಶಾ ತಡಾನಿ ನಾಯಕಿ ಎನ್ನಲಾಗಿತ್ತು. ಆದರೆ, ಇದೀಗ ಮತ್ತೊಂದು ನಟಿಯ ಹೆಸರು ಕೇಳಿ ಬಂದಿದೆ.
'RC 16' ನಾಯಕಿಯರ ಸಾಲಿನಲ್ಲಿ ರಾಶಾ ತಡಾನಿ ಮತ್ತು ಕೀರ್ತಿ ಸುರೇಶ್ ಹೆಸರುಗಳು ಹಲವು ಬಾರಿ ಮುನ್ನಲೆಗೆ ಬಂದಿತ್ತು. ಇದೀಗ ಸಹಜ ಸುಂದರಿ ಸಾಯಿ ಪಲ್ಲವಿ ಹೆಸರು ಚಾಲ್ತಿಗೆ ಬಂದಿದೆ. ಅವರು ರಾಮ್ಚರಣ್ಗೆ ಜೋಡಿಯಾಗಲಿದ್ದಾರೆ ಎಂಬುದು ಸದ್ಯದ ಸುದ್ದಿ. ಸಾಯಿ ಪಲ್ಲವಿ ಜೊತೆ ಚಿತ್ರತಂಡ ಈ ಬಗ್ಗೆ ಚರ್ಚಿಸಿದೆ ಎಂದು ವರದಿಯಾಗಿದೆ. ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಆದರೆ, ಈಗಿರುವ ವದಂತಿ ಸುದ್ದಿ ನಿಜವಾಗಲಿ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ. ರಾಮ್‌ಚರಣ್ ಜೊತೆ ಸಾಯಿ ಪಲ್ಲವಿ ತೆರೆ ಹಂಚಿಕೊಂಡರೆ ಉತ್ತಮ ಎಂದು ಕಮೆಂಟ್ ಮಾಡುತ್ತಿದ್ದಾರೆ. ಪ್ರಸಿದ್ಧ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್, ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.