ಬಾಲಿವುಡ್ ದಬಾಂಗ್ ಸ್ಟಾರ್ ಸಲ್ಮಾನ್ ಖಾನ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಟ ನಿಂತರೂ, ಕುಂತರೂ ಸುದ್ದಿಯೇ. ಅಂತಹದರಲ್ಲಿ ಈ ನಟ ಈವೆಂಟ್ ಒಂದರಲ್ಲಿ ಮೈ ಕುಣಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ.
ಮಿಶ್ರ ಪ್ರತಿಕ್ರಿಯೆ ವ್ಯಕ್ತ:ವೈರಲ್ ವಿಡಿಯೋದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಬರ್ತ್‌ಡೇ ಪಾರ್ಟಿಯೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೊಳಗಾಗಿದೆ. ಹಲವರು ನಟನ ಎನರ್ಜಿಗೆ ಫಿದಾ ಆದರೆ, ಕೆಲವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ನೋಡಿದ ಸಲ್ಲು ಫ್ಯಾನ್ಸ್ ಬೇಸರಗೊಂಡಿದ್ದಾರೆ. ಸಲ್ಮಾನ್ ಅವರ ಡ್ಯಾನ್ಸ್ಗೆ ಖುಷಿ ಜೊತೆಗೆ ಬೇಸರದ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ.
ಆರೋಗ್ಯದ ಬಗ್ಗೆ ಕಳವಳ: ಅಭಿಮಾನಿಯೊಬ್ಬರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಸಲ್ಮಾನ್ ಖಾನ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಲ್ಮಾನ್ ಖಾನ್ ಬಹಳ ದಣಿದಿದ್ದಾರೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಬರೆಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರನಟ ತಮ್ಮದೇ ಸೂಪರ್ ಹಿಟ್ ಸಿನಿಮಾ ದಬಾಂಗ್ (2010)ನ 'ಹಮ್ಕಾ ಪೀನಿ ಹೈ' ಹಾಡಿಗೆ ನೃತ್ಯ ಮಾಡುತ್ತಿದ್ದಾರೆ. ದೃಶ್ಯದಲ್ಲಿ, ಸಲ್ಮಾನ್ ಸಿಲ್ವರ್ ಕಲರ್ ಜಾಕೆಟ್ ಜಾಕೆಟ್ ಮತ್ತು ಬ್ಲ್ಯಾಕ್ ಪ್ಯಾಂಟ್ ಟೀ ಶರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪಾರ್ಟಿಯಲ್ಲಿ ಸಲ್ಮಾನ್ ಖಾನ್ ಡ್ಯಾನ್ಸ್ ಮಾಡಿದ್ದಾರೆ.