ಕರ್ನಾಟಕ

karnataka

ETV Bharat / entertainment

ಬಂಧನದಲ್ಲಿರುವ ಯಶೋದಾ ನವೆಂಬರ್​ 11 ಕ್ಕೆ ಬಿಡುಗಡೆ

ಸಮಂತಾ ರುತ್ ಪ್ರಭು ಅಭಿನಯದ ಪಂಚ ಭಾಷೆಯ ಮಹಿಳಾ ಪ್ರಧಾನ ಚಿತ್ರ ಯಶೋದಾ ಇದೆ ನವೆಂಬರ್​ 11ಕ್ಕೆ ತೆರೆಕಾಣಲಿದೆ.

By

Published : Oct 17, 2022, 7:30 PM IST

Samantha starred Yashoda movie release nov 11th
Yashoda movie release nov 11th

ಸಮಂತಾ ಅಭಿನಯದ 'ಯಶೋದಾ' ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಪ್ರೇಕ್ಷಕರಿಗೆ ಹಲವು ದಿನಗಳಿಂದ ಇತ್ತು. ಈಗ ಬಿಡುಗಡೆ ದಿನಾಂಕವು ಘೋಷಣೆಯಾಗಿದೆ. ನವೆಂಬರ್ 11ರಂದು ಜಗತ್ತಿನಾದ್ಯಂತ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಶಿವಲೆಂಕ ಕೃಷ್ಣ ಪ್ರಸಾದ್ ಅವರು ತಮ್ಮ ಶ್ರೀದೇವಿ ಮೂವಿ ಪ್ರೊಡಕ್ಷನ್ಸ್ ಬ್ಯಾನರ್​ನಡಿ 14ನೇ ಚಿತ್ರವಾಗಿ ನಿರ್ಮಿಸುತ್ತಿದ್ದರೆ, ಹರಿ-ಹರೀಶ್ ಅವರು ನಿರ್ದೇಶನ ಮಾಡಿದ್ದಾರೆ.

ಇದೊಂದು ಹೊಸ ಶೈಲಿಯ ಆ್ಯಕ್ಷನ್ ಥ್ರಿಲ್ಲರ್ ಎನ್ನುವ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ ಚಿತ್ರದಲ್ಲಿ ಸಸ್ಪೆನ್ಸ್ ಮತ್ತು ಎಮೋಷನ್​ಗಳು ಸಮವಾಗಿ ಬೆರೆತಿದ್ದು, ಪ್ರೇಕ್ಷಕರನ್ನು ಸೀಟಿನಂಚಿನಲ್ಲಿ ಕೂರಿಸುವ ಶಕ್ತಿ ಹೊಂದಿದೆ. ಸಮಂತಾ ಈ ಚಿತ್ರದ ಆ್ಯಕ್ಷನ್ ದೃಶ್ಯಗಳಿಗಾಗಿ ಅವರು ಬೆವರು ಮತ್ತು ರಕ್ತವನ್ನೇ ಹರಿಸಿದ್ದಾರೆ ಎಂದರೆ ತಪ್ಪಿಲ್ಲ. ಬರೀ ತೆಲುಗು ಅವತರಣಿಕೆಯಷ್ಟೇ ಅಲ್ಲ, ತಮಿಳಿನಲ್ಲೂ ಅವರು ಡಬ್ಬಿಂಗ್ ಮಾಡಿದ್ದಾರೆ. ಮಣಿಶರ್ಮ ಅವರ ಹಿನ್ನೆಲೆ ಸಂಗೀತ ಈ ಚಿತ್ರದ ಹೈಲೈಟ್ ಆಗಿ ಮೂಡಿಬಂದಿದೆ.

ಯಶೋದಾ ನಂವೆಂಬರ್​ 11 ಕ್ಕೆ ಬಿಡುಗಡೆ

ಇದನ್ನೂ ಓದಿ :ಯಶೋದಾ ಸಿನಿಮಾದಿಂದ ಕನ್ನಡಕ್ಕೆ ಬಂದ ಟಾಲಿವುಡ್ ನಟಿ

ಈಗಾಗಲೇ ತೆಲುಗು ಚಿತ್ರದ ಅವತರಣಿಕೆಯು ಸೆನ್ಸಾರ್ ಆಗಿದೆ. ಸದ್ಯದಲ್ಲೇ ಬೇರೆ ಭಾಷೆಗಳ ಸೆನ್ಸಾರ್ ಆಗಲಿದೆ. ತಾಂತ್ರಿಕ ಸೇರಿದಂತೆ ಯಾವುದೇ ವಿಷಯದಲ್ಲೂ ರಾಜಿಯಾಗದೇ, ಈ ಚಿತ್ರವನ್ನು ಅದ್ಧೂರಿ ಬಜೆಟ್ ನಿರ್ಮಿಸಲಾಗಿದೆ. 100ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ಮಾಡಲಾಗಿದ್ದು,ಹೊಸ ಶೈಲಿಯ ಸಿನಿಮಾಗಳಿಗೆ ಹಾತೊರೆಯುತ್ತಿರುವ ಪ್ರೇಕ್ಷಕರು ಈ ಚಿತ್ರವನ್ನು ಮೆಚ್ಚುತ್ತಾರೆ ಎಂಬ ನಿರೀಕ್ಷೆ ಇದೆ.

ಸಮಂತಾ ಜತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್​ ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಯಶೋದಾ ಚಿತ್ರಕ್ಕೆ ಎಂ. ಸುಕುಮಾರ್ ಛಾಯಾಗ್ರಹಣ ಮಾಡಿದ್ದು, ಪುಲಗಂ ಚಿನ್ನಾರಾಯಣ ಮತ್ತು ಡಾ ಚಲ್ಲ ಭಾಗ್ಯಲಕ್ಷ್ಮೀ ಅವರ ಸಂಭಾಷಣೆ ಬರೆದಿದ್ದಾರೆ. ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ಯಶೋದಾ, ನವೆಂಬರ್ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

ಇದನ್ನೂ ಓದಿ :ಯಶೋದಾ ಸಿನಿಮಾ ಟೀಸರ್ ರಿಲೀಸ್​... ಹೊಸ ಅವತಾರದಲ್ಲಿ ನಟಿ ಸಮಂತಾ ರುತ್ ಪ್ರಭು

ABOUT THE AUTHOR

...view details