ದೇಶಾದ್ಯಂತ ವರಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ದಿನದಂದೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಹೊಸ ಸಿನಿಮಾದ ಕ್ರಾಂತಿ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ದರ್ಶನ್ ಅಭಿನಯಿಸುತ್ತಿರುವ 55ನೇ ಚಿತ್ರ ಕ್ರಾಂತಿ ಆಗಿದ್ದು, ಈ ಸಿನಿಮಾಕ್ಕೆ 'ಕ್ರಾಂತಿ' ಎಂದು ಟೈಟಲ್ ಇಡಲಾಗಿದೆ. ಸದ್ಯ ಬಿಡುಗಡೆ ಆಗಿರುವ ಪೋಸ್ಟರ್‌ನಲ್ಲಿ ದರ್ಶನ್ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಬಾಸ್ಕೆಟ್ ಬಾಲ್ ಹಿಡಿದು ನಡೆದುಕೊಂಡು ಬರುತ್ತಿರುವ ಚಿತ್ರದಲ್ಲಿ ಕಾಣ ಬಹುದಾಗಿದೆ.
ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕ್ರಾಂತಿ ಚಿತ್ರಕ್ಕೆ ನೀವು ತೋರಿರುವ ಪ್ರೀತಿ - ಅಭಿಮಾನಕ್ಕೆ ನಾವು ಆಭಾರಿಯಾಗಿದ್ದೇವೆ. ನಮ್ಮ ಚಿತ್ರದ ಹೊಸ ಪೋಸ್ಟರ್ ನಿಮಗಾಗಿ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಪೋಸ್ಟರ್ ನೋಡಿದರೆ ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಎಂದು ತಿಳಿಯುತ್ತದೆ.