ಬೆಂಗಳೂರು: ಸ್ಯಾಂಡಲ್ವುಡ್ನ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಶನಿವಾರ ಮಧ್ಯಾಹ್ನ ಕಿರಣ್ ಗೋವಿ ಅವರು ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಹೃದಯದ ತೊಂದರೆ ಇರಬಹುದು ಎಂದು ಭಾವಿಸಿ ಅವರ ಆಪ್ತರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೇ ಕಿರಣ್ ಗೋವಿ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹೃದಯಾಘಾತದಿಂದ ಸ್ಯಾಂಡಲ್ವುಡ್ ನಿರ್ದೇಶಕ ಕಿರಣ್ ಗೋವಿ ನಿಧನ - ಸಂಚಾರಿ
ಸ್ಯಾಂಡಲ್ವುಡ್ನ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಘಾತದಿಂದ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ನಿರ್ದೇಶಕ ಕಿರಣ್ ಗೋವಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಚಿತ್ರ ಪ್ರೇಮಿಗಳನ್ನು ಅಗಲಿದ್ದಾರೆ. ಉಳ್ಳಾಲದ ಕಿರಣ್ ಗೋವಿಯವರ ನಿವಾಸದಲ್ಲಿ ಮೃತರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಕಿರಣ್ ಗೋವಿ ಅವರ ಪಯಣ, ಸಂಚಾರಿ ಹಾಗೂ ಯಾರಿಗುಂಟು ಯಾರಿಗಿಲ್ಲ ಎಂಬ ಚಿತ್ರಗಳಿಗೆ ನಿರ್ದೇಶನ ಮಾಡಿ ಹೆಸರು ಮಾಡಿದ್ದರು. ಸ್ಯಾಂಡಲ್ವುಡ್ನ ಹಾಸ್ಯ ನಟ ರವಿಶಂಕರ್ ಗೌಡ ಅವರನ್ನು ಕಿರಣ್ ಗೋವಿಯವರು ಪಯಣ ಚಿತ್ರದ ಮೂಲಕ ಹೀರೋ ಆಗಿ ಪರಿಚಯಿಸಿದರು.
ಇದನ್ನೂ ಓದಿ:ಹನೂರಿನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರಾಜ್