ಮುಂಬೈ:ನಿರ್ದೇಶಕ ಸಾಜಿದ್ ಖಾನ್ ವಿರುದ್ಧ ಮೀಟೂ ಆರೋಪ ಮಾಡಿದ್ದ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಅವರು ಇಂದು ಮುಂಬೈನ ಜುಹು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಜಿದ್ ಖಾನ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಕೇಸ್ ದಾಖಲಿಸಿದ್ದಾರೆ.
ಹಿಂದಿ ಅವತರಣಿಗೆಯ ಬಿಗ್ಬಾಸ್ಗೆ ಎಂಟ್ರಿ ಕೊಟ್ಟಿರುವ ಸಾಜಿದ್ ಖಾನ್ ವಿರುದ್ಧ ನಟಿ ಶೆರ್ಲಿನ್ ಚೋಪ್ರಾ ಈಚೆಗಷ್ಟೇ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಮಾಡಿದ್ದರು. ಸಾಜಿದ್ ಖಾನ್ಗೆ ಸಹಕರಿಸಲಿಲ್ಲ ಎಂಬ ಕಾರಣಕ್ಕಾಗಿ ನನಗೆ ಬಾಲಿವುಡ್ ಸಿನಿಮಾ ಆಫರ್ಗಳು ಸಿಗದಂತೆ ಮಾಡಿದರು.