ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ ಅಭಿನಯದ 125ನೇ ಚಿತ್ರ ವೇದ. ಸದ್ಯಕ್ಕೆ ಪೋಸ್ಟರ್ನಿಂದಲೇ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರೋ ವೇದ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ.
ಹೌದು, ಹ್ಯಾಟ್ರಿಕ್ ಹೀರೋ ಶಿವ ರಾಜ್‌ಕುಮಾರ್ ಹಾಗೂ ಎ ಹರ್ಷ ನಿರ್ದೇಶನದ ನಾಲ್ಕನೇ ಸಿನಿಮಾ ಇದಾಗಿದ್ದು, ಚಿತ್ರದ ಟೀಸರ್ ಥ್ರಿಲ್ಲಿಂಗ್ ಜೊತೆಗೆ ಹಲವು ಕೌತುಕಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ನಟಿ ಶಿವಣ್ಣ ಮಚ್ಚು ಹಿಡಿದು ಅಬ್ಬರಿಸುವುದನ್ನು ನೋಡಿದ್ರೆ ನಿಜಕ್ಕೂ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸುವ ಸೂಚನೆ ಸಿಗ್ತಾ ಇದೆ.
ಚಿತ್ರದಲ್ಲಿ ಶಿವ ರಾಜ್‌ಕುಮಾರ್ ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರೆ. ವೇದ ಸಿನಿಮಾ 1960ರ ದಶಕದಲ್ಲಿ ನಡೆದ ಕಥೆಯಾಧಾರಿತವಾಗಿದ್ದು, ಕರುನಾಡ ಚಕ್ರವರ್ತಿ ಜೊತೆ ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಅರುಣ್ ಸಾಗರ್ ಮಗಳು ಅದಿತಿ ಸಾಗರ್ ಹಾಗೂ ಅನುಪಮ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮಾಶ್ರೀ ಪ್ರಮುಖ ಪಾತ್ರಗಳಲ್ಲಿ ಬಣ್ಣಹಚ್ಚಿದ್ದಾರೆ.
ಇದನ್ನೂ ಓದಿ:ಶಿವಣ್ಣ ಅಭಿನಯದ 125ನೇ ಸಿನಿಮಾ ವೇದ : ಪಸ್ಟ್ ಲುಕ್ ಕಾರ್ಯಕ್ರಮದ ನೇರಪ್ರಸಾರ
ವೇದ ಚಿತ್ರವನ್ನು ಜೀ ಸ್ಟುಡಿಯೋ ಜೊತೆಗೂಡಿ ಗೀತಾ ಸ್ಟುಡಿಯೋಸ್ ಮೂಲಕ ಗೀತಾ ಶಿವ ರಾಜ್‌ಕುಮಾರ್ ನಿರ್ಮಿಸುತ್ತಿದ್ದಾರೆ. ಸದ್ಯಕ್ಕೆ ರಿವೀಲ್ ಆಗಿರುವ ಟೀಸರ್ನಲ್ಲಿ ವೆಪನ್ಸ್ ಆಫ್ ದಿ ರಿವೀಲ್ ಎಂಬ ಟ್ಯಾಗ್ ಲೈನ್ ಇದೆ. ಭಾರಿ ಕ್ರೇಜ್ ಹುಟ್ಟುಹಾಕಿರೋ ವೇದ, ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಅಂದರೆ ಡಿಸೆಂಬರ್ 23ಕ್ಕೆ ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.