ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಜೋಡಿಯಾಗಿ ನಟಿಸುತ್ತಿರುವ ಇನ್ನೂ ಹೆಸರಿಡಿದ ಚಿತ್ರವೊಂದರ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಿಕಟ ಕವಿ ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ಇದಾಗಿದ್ದು, ಬೆಂಗಳೂರಿನಲ್ಲಿ ಈ ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ಸಾಗುತ್ತಿದೆ.
ಹೊಸ ಚಿತ್ರದ ಮೂಲಕ ಮುಖಾಮುಖಿಯಾದ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಸದ್ಯ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ನಡುವಿನ ಸನ್ನಿವೇಶವನ್ನು ಯೋಗರಾಜ್ ಭಟ್ ಕ್ಯಾಮರಾದಲ್ಲಿ ಸೆರೆ ಹಿಡಿಯುತ್ತಿದ್ದಾರೆ. ಈ ಸ್ಟಾರ್ಗಳ ಜೊತೆಗೆ ಇಂದು ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಸೇರಿದಂತೆ ಹಲವು ನಟ-ನಟಿಯರು ಈ ವೇಳೆ ಕಾಣಿಸಿಕೊಂಡರು. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.
ಹೊಸ ಚಿತ್ರದ ಮೂಲಕ ಮುಖಾಮುಖಿಯಾದ ಶಿವರಾಜ್‌ಕುಮಾರ್ ಮತ್ತು ಪ್ರಭುದೇವ ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಪ್ರೊಡಕ್ಷನ್ ನಂ 47 ಹೆಸರಿನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನು, ಯೋಗರಾಜ್ ಭಟ್ ಹಾಗೂ ರಾಕ್‌ಲೈನ್ ವೆಂಕಟೇಶ್ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾವನ್ನು ನಿರ್ಮಾಣ ಮಾಡುವುದರ ಜೊತೆಗೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲೂ ರಾಕ್‌ಲೈನ್ ವೆಂಕಟೇಶ್ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ:ದೃಶ್ಯಂ 3 ಸಿನಿಮಾ ಬಗ್ಗೆ ಅಧಿಕೃತ ಘೋಷಣೆ.. ನಟ ಮೋಹನ್ ಲಾಲ್ ಅಭಿಮಾನಿಗಳು ಫುಲ್ ಖುಷ್