ಸ್ಯಾಂಡಲ್ವುಡ್ ಮೂಗುತಿ ಸುಂದರಿ ಶ್ರದ್ಧಾ ಶ್ರೀನಾಥ್ ಬಹುಭಾಷಾ ತಾರೆಯಾಗಿ ಮಿಂಚುತ್ತಿದ್ದಾರೆ. ಯೂಟರ್ನ್ ಸಿನಿಮಾ ಮೂಲಕ ಪ್ರೇಕ್ಷಕರನ್ನು ವಿಶೇಷವಾಗಿ ಮನರಂಜಿಸಿದವರು. ಇದೀಗ ಕನ್ನಡದ ಜೊತೆಗೆ ಮಲಯಾಳಂ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಛಾಪು ಮೂಡಿಸುತ್ತಿದ್ದಾರೆ. ಇವರ ನಟನೆಗೆ ಮನಸೋತಿರುವ ನಿರ್ದೇಶಕರು ಕೈ ತುಂಬ ಅವಕಾಶಗಳನ್ನು ನೀಡುತ್ತಿದ್ದಾರೆ. ಇದೀಗ ಹೊಸ ಸಿನಿಮಾವೊಂದಕ್ಕೆ ಶ್ರದ್ಧಾ ಶ್ರೀನಾಥ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ಅವರ 'ಸೈಂಧವ್' ಸಿನಿ ಪ್ರೇಕ್ಷಕರಲ್ಲಿ ಅಪಾರ ನಿರೀಕ್ಷೆ ಹುಟ್ಟಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿಬರುತ್ತಿರುವ ಚಿತ್ರದ ಶೂಟಿಂಗ್ ಈಗಾಗಲೇ ಅರ್ಧ ಭಾಗದಷ್ಟು ಮುಕ್ತಾಯಗೊಂಡಿದೆ. ಸದ್ಯ ವೈಜಾಗ್ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ಅಡಿಯಲ್ಲಿ ಭಾರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ. 'ಸೈಂಧವ್' ಚಿತ್ರಕ್ಕೆ ನಾಯಕಿಯಾಗಿದ್ದಾರೆ ಶ್ರದ್ಧಾ ಶ್ರೀನಾಥ್. ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಜೀವನ ಕೊಟ್ಟ 'ಎರಡನೇ ತಾಯಿ'ಯನ್ನು ಭೇಟಿಯಾದ ಡಾಲಿ: ಧನಂಜಯ್ ಭೂಮಿ ಮೇಲಿರಲು ಇವರೇ ಕಾರಣ
ರಿಲೀಸ್ ಆದ ಪೋಸ್ಟರ್ನಲ್ಲಿ ಶ್ರದ್ಧಾ ಸೀರೆ ಉಟ್ಟು ಕೈಯಲ್ಲಿ ಟಿಫಿನ್ ಬಾಕ್ಸ್ ಹಿಡಿದುಕೊಂಡು ಏನೋ ಗಹನ ಚಿಂತನೆಯಲ್ಲಿ ಮುಳುಗಿರುವಂತಿದೆ. ಸೂಪರ್ ಹಿಟ್ ಜೆರ್ಸಿ ಸಿನಿಮಾದಲ್ಲಿ ಅಭಿನಯಿಸಿದ್ದ ಶ್ರದ್ಧಾ ಅವರೀಗ ಸೈಂಧವ್ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆಯಲಿದ್ದಾರೆ. ನಟಿಯ ಹೊಸ ಲುಕ್ ಕಂಡ ಅಭಿಮಾನಿಗಳಲ್ಲಿ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿದೆ. ಈ ಪೋಸ್ಟರ್ ಅನ್ನು ಶ್ರದ್ಧಾ ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನೆಟ್ಟಿಗರು ಎಮೋಜಿಗಳ ಜೊತೆಗೆ ಬಗೆಬಗೆಯ ಬರಹಗಳಿಂದ ಕಾಮೆಂಟ್ ವಿಭಾಗವನ್ನು ತುಂಬಿದ್ದಾರೆ. ಬಾಲಿವುಡ್ ನಟ ನವಾಜುದ್ಧೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿಮಾ ರಂಗ ಪ್ರವೇಶಿಸಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್.ಮಣಿಕಂಠನ್ ಛಾಯಾಗ್ರಹಣ, ಗ್ಯಾರಿ ಬಿ.ಎಚ್. ಸಂಕಲನ, ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೈಂಧವ್ ಡಿಸೆಂಬರ್ ತಿಂಗಳ ಕ್ರಿಸ್ಮಸ್ ಹಬ್ಬದ ಸಮಯದಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ಯೋಜಿಸಿದೆ. ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.
ಇದನ್ನೂ ಓದಿ:ಶೂಟಿಂಗ್ ಸೆಟ್ನಲ್ಲಿ ಸಲ್ಮಾನ್ ಖಾನ್ ಡ್ರೆಸ್ ರೂಲ್ಸ್: ಸ್ಪಷ್ಟನೆ ಕೊಟ್ಟ ಪಲಕ್ ತಿವಾರಿ