ಕರ್ನಾಟಕ

karnataka

ETV Bharat / entertainment

ದುಬೈನಲ್ಲಿ ನಡೆಯಲಿದೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ 'SIIMA 2023' - ಈಟಿವಿ ಭಾರತ ಕನ್ನಡ

SIIMA 2023: ಪ್ರತಿಷ್ಠಿತ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್​ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ.

SIIMA 2023
ಸೈಮಾ ಪ್ರಶಸ್ತಿ

By

Published : Aug 14, 2023, 1:48 PM IST

ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಕಾರ್ಯಕ್ರಮ ಸೈಮಾ ( SIIMA- South Indian International Movie Awards) ಅವಾರ್ಡ್ಸ್. ಒಂದೇ ವೇದಿಕೆಯಲ್ಲಿ ನಟ, ನಟಿಯರು, ನಿರ್ದೇಶಕರು ಹಾಗೂ ತಂತ್ರಜ್ಞರನ್ನು ನೋಡುವ ಸುಂದರ ಗಳಿಗೆಯಿದು. ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಸೆಪ್ಟಂಬರ್​ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ.

ಸೈಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸೌತ್ ಸಿನಿಮಾ ಅಂದರೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಣವಾಗಿರುವ ಅತ್ಯುತ್ತಮ ಚಿತ್ರಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ನಟನೆ, ನಿರ್ದೇಶನ, ನಿರ್ಮಾಣ, ಛಾಯಾಗ್ರಹಣ, ಸಾಹಿತ್ಯ ಹೀಗೆ ಎಲ್ಲಾ ವಿಭಾಗದಲ್ಲೂ ಪ್ರಶಸ್ತಿಯನ್ನು ಕೊಡಲಾಗುತ್ತದೆ. ಇದೀಗ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸ್ಟಾರ್​ ನಟರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಹುಭಾಷಾ ನಟಿ ಶೃತಿ ಹಾಸನ್ ಮಾತನಾಡಿ, "ಬೆಂಗಳೂರಿಗೆ ಮರಳಿ ಬಂದಿರುವುದು ಖುಷಿ ಆಗಿದೆ. ಮೊದಲ ವರ್ಷ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದ್ದೆ. ಸೈಮಾ ಮತ್ತಷ್ಟು ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಚಿತ್ರರಂಗದ ಮಂದಿಯನ್ನು, ಪ್ರತಿಭಾವಂತರನ್ನು ಗೌರವಿಸುವ ಕೆಲಸ ಮುಂದುವರಿಸಲಿ" ಎಂದು ಹಾರೈಸಿದರು. ಬಳಿಕ ಮಾತನಾಡಿದ ನಟ ರಾಕ್ಷಸ ಡಾಲಿ ಧನಂಜಯ್​ ಸೈಮಾ ಅವಾರ್ಡ್ಸ್​ ಜೊತೆಗಿನ ಸುಂದರ ನೆನಪುಗಳನ್ನು ಮೆಲಕು ಹಾಕಿದರು. ನಟಿ ಪ್ರಣಿತಾ ಸುಭಾಷ್​ ಸೈಮಾ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ನಂತರ ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್ ಮಾತನಾಡಿ, "ಸತತ 11 ನೇ ವರ್ಷದಿಂದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಶಸ್ತಿ ನೀಡುವಲ್ಲಿ ಮುಂಚೂಣಿಯಲ್ಲಿದ್ದೇವೆ. ಜಾಗತಿಕ ಮಟ್ಟದಲ್ಲಿ ದಕ್ಷಿಣ ಭಾರತದ ಸಿನಿಮಾಗಳನ್ನು ಗುರುತಿಸಿ ಪ್ರೋತ್ಸಾಹ ನೀಡಲಾಗುವುದು. ಈ ಬಾರಿ ಸೈಮಾ ಅದ್ಧೂರಿ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ನಡೆಯಲಿದೆ" ಎಂದು ತಿಳಿಸಿದರು.

ಸೈಮಾ ಅವಾರ್ಡ್ಸ್​ ಕಾರ್ಯಕ್ರಮವನ್ನು ಎರಡು ಭಾಗಗಳಲ್ಲಿ ಆಯೋಜಿಸಲಾಗಿದೆ. ಪ್ರಶಸ್ತಿಗಳ ಮೊದಲ ದಿನದಂದು, ಜನರೇಷನ್ ನೆಕ್ಸ್ಟ್ ಅವಾರ್ಡ್‌ಗಳನ್ನು ದಕ್ಷಿಣ ಭಾರತದ ಭರವಸೆಯ, ಉದಯೋನ್ಮುಖ ನಟರಿಗೆ ನೀಡಲಾಗುತ್ತದೆ. ಎರಡನೇ ದಿನ ಪ್ರಮುಖ ಸೈಮಾ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ.

ನಾಮನಿರ್ದೇಶನಗೊಂಡ ಕನ್ನಡ ಸಿನಿಮಾಗಳು: ಸ್ಯಾಂಡಲ್​ವುಡ್​ನ ರಾಕಿಂಗ್ ಸ್ಟಾರ್ ಯಶ್ ಅವರ ಬ್ಲಾಕ್​ಬಸ್ಟರ್ ಸಿನಿಮಾ ಕೆಜಿಎಫ್ 2 ಮತ್ತು ಡಿವೈನ್​ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಪ್ರಸಿದ್ಧ ಚಿತ್ರ ಕಾಂತಾರ ಅತ್ಯುತ್ತಮ ಚಿತ್ರ ಸೇರಿದಂತೆ 11 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿವೆ. ರಕ್ಷಿತ್ ಶೆಟ್ಟಿ ಅವರ ಸೂಪರ್​ ಹಿಟ್ ಚಿತ್ರ '777 ಚಾರ್ಲಿ', ಡಾರ್ಲಿಂಗ್​ ಕೃಷ್ಣ ದಂಪತಿಯ ಲವ್ ಮಾಕ್ಟೇಲ್​ ಮತ್ತು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಕೂಡ ಅತ್ಯುತ್ತಮ ಚಲನಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿವೆ.

ಇದನ್ನೂ ಓದಿ:ಬೆಂಗಳೂರು ಸೈಮಾ ಅವಾರ್ಡ್ಸ್ 2022: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ ನೋಡಿ

ABOUT THE AUTHOR

...view details