ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರತಿಷ್ಠಿತ ಎಂದು ಪರಿಗಣಿಸಲ್ಪಟ್ಟಿರುವ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭವು ಮುಂದಿನ ತಿಂಗಳು 10 ಮತ್ತು 11 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೈಮಾ ವೇದಿಕೆಯಲ್ಲಿ ಸ್ಪರ್ಧಿಸಲಿರುವ ಟಾಪ್ ನಟರ ಚಿತ್ರಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾದ ಮತ್ತು ನಾಮನಿರ್ದೇಶನಕ್ಕೆ ಆಯ್ಕೆಯಾದ ಚಲನಚಿತ್ರಗಳು ಇವಾಗಿದ್ದು ಎಷ್ಟು ವಿಭಾಗಗಳಲ್ಲಿ ಸ್ಪರ್ಧಿಸಲಿವೆ ಎಂದು ತಿಳಿಸಲಾಗಿದೆ.
ಕನ್ನಡದ ವಿಷಯಕ್ಕೆ ಬಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಚಿತ್ರವು 10 ಹೆಚ್ಚು ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ (ನಿರ್ದೇಶನ) ನಟನೆಯ ಸಿನಿಮಾ ಗರುಡ ಗಮನ ವೃಷಭ ವಾಹನ ಕೂಡ 8 ವಿಭಾಗಗಳಲ್ಲಿ ನಾಮಿನೇಟ್ ಆದರೆ ಪುನೀತ್ ರಾಜ್‌ಕುಮಾರ್ ನಟನೆಯ ಯುವರತ್ನ ಚಿತ್ರವು 7 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ಇವುಗಳ ಜೊತೆಗೆ ದುನಿಯಾ ವಿಜಯ್ ನಟನೆ ಮತ್ತು ನಿರ್ದೇಶನ ಮಾಡಿರುವ ಸಲಗ ಮತ್ತು ಶಿವರಾಜ್ ಕುಮಾರ್ ನಟನೆಯ ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರ ಕೂಡ ನಾಮನಿರ್ದೇಶನಗೊಂಡಿವೆ.
ಟಾಲಿವುಡ್ನಲ್ಲಿ 'ಪುಷ್ಪ', 'ಅಖಂಡ', 'ಉಪ್ಪೇನ' ಮತ್ತು 'ಜಾತಿರತ್ನ' ಹೆಚ್ಚು ವಿಭಾಗಗಳಲ್ಲಿ ನಾಮಿನೇಟ್ ಆಗಿವೆ. ಸೌತ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ-ದಿ ರೈಸ್' ಚಿತ್ರ 12 ವಿಭಾಗಗಳಲ್ಲಿ ನಾಮಿನೇಟ್ ಆಗಿದ್ದರೆ, ಬಾಲಯ್ಯ ಅಭಿನಯದ 'ಅಖಂಡ' ಸಿನಿಮಾ 10 ವಿಭಾಗಗಳಲ್ಲಿ ಎರಡನೇ ಸ್ಥಾನಕ್ಕೆ ನಾಮನಿರ್ದೇಶನಗೊಂಡಿದೆ.