ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ಬಹುನಿರೀಕ್ಷಿತ 'ಬಘೀರ' ಚಿತ್ರದ ಟೀಸರ್ ಕೂಡ ಬಿಡುಗಡೆ ಆಗಿದೆ. ಈ ಟೀಸರ್ಗೆ ಸಿನಿ ಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಶ್ರೀಮುರಳಿ ಅವರ ಹುಟ್ಟುಹಬ್ಬಕ್ಕೆ ಹಾಗೂ ಅವರ ಮುಂಬರುವ ಚಿತ್ರಗಳಿಗೆ ಸ್ಯಾಂಡಲ್ವುಡ್ನ ನಟ-ನಟಿಯರು, ಅಭಿಮಾನಿಗಳು ಹಾಗೂ ನೆಟಿಜನ್ಗಳು ಶುಭಾಶಯ ಕೋರಿದ್ದಾರೆ. ಕುಟುಂಬದಲ್ಲಿ ಸಾಕಷ್ಟು ನೋವುಗಳಿದ್ದರೂ ಅದನ್ನು ಬದಿಗಿಟ್ಟು ಈ ಬಾರಿಯ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದು ಮತ್ತೊಂದು ವಿಶೇಷ. ಅವರ ಹುಟ್ಟುಹಬ್ಬಕ್ಕೆ ಸಖತ್ ಉಡುಗೊರೆಗಳು ಕೂಡ ಸಿಕ್ಕಿವೆ.
ರೋರಿಂಗ್ ಸ್ಟಾರ್ ಶ್ರೀಮುರಳಿ ಉಗ್ರಂ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಡಮ್ ಹೆಚ್ಚಿಸಿಕೊಂಡಿರುವ ಶ್ರೀಮುರಳಿ, ತಮ್ಮದೇಯಾದ ಅಭಿಮಾನಿಗಳ ಬಳಗ ಹೊಂದಿದವರು. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಸಿನಿ ಪ್ರಿಯರ ಕ್ರೇಜ್ ಅನ್ನು ದುಪ್ಪಟ್ಟು ಮಾಡಿದವರು. ಸದ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಮತ್ತೊಂದು ಸಿನಿಮಾ ಕೂಡ ಅನೌನ್ಸ್ ಆಗಿದೆ. ಈ ಚಿತ್ರಕ್ಕೆ 'ಪರಾಕ್' ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಚಿತ್ರದ ಫೋಸ್ಟರ್ ಕೂಡ ಭಾನುವಾರ ರಿವೀಲ್ ಆಗಿದೆ.
ಯವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಶ್ರೀಮುರಳಿ ಜೊತೆ ಚಿತ್ರಕಥೆ ಬಗ್ಗೆ ಕೂಲಂಕಷವಾಗಿ ಚರ್ಚೆ ಮಾಡಿರುವ ಹಾಲೇಶ್, ಆ್ಯಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಸಿನಿಮಾ ಮಾಡಲು ಹೊರಟಿದ್ದಾರೆ. ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್, 'ಪರಾಕ್' ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಕ್ರಿಯೇಟರ್ ಹಾಗೂ ಡೈರೆಕ್ಟರ್ ಆಗಿರುವ ಅವರಿಗೆ ಮಂಜುನಾಥ್ ಬರವಣಿಗೆಯಲ್ಲಿ ಸಾಥ್ ಕೊಟ್ಟಿದ್ದಾರೆ.
ರೋರಿಂಗ್ ಸ್ಟಾರ್ ಶ್ರೀಮುರಳಿ ಇದೊಂದು ಆ್ಯಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಸಿನಿಮಾ ಆಗಿದ್ದು ಇದನ್ನು ಬ್ರ್ಯಾಂಡ್ ಕೋಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್ ಅಡಿ ನಿರ್ಮಾಣ ಮಾಡಲಾಗುತ್ತಿದೆ. ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಬಹುತೇಕ ಬೆಣ್ಣೆ ನಗರಿ ದಾವಣಗೆರೆ ಪ್ರತಿಭೆಗಳೇ ಒಂದಾಗಿ ಮಾಡುತ್ತಿರುವ ಚಿತ್ರ ಕೂಡ ಇದಾಗಿದ್ದು ಟೈಟಲ್ ಪೋಸ್ಟರ್ಗೆ ನೆಟಿಜನ್ ಹಾಗೂ ಸಿನಿ ಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ಅವತಾರದಲ್ಲಿ ಶ್ರೀಮುರಳಿ ದರ್ಶನ ಕೊಟ್ಟಿದ್ದಾರೆ. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಿರುವ 'ಪರಾಕ್' ಬಳಗ ಮೇ ಅಥವಾ ಜೂನ್ ತಿಂಗಳಿನಿಂದ ಶೂಟಿಂಗ್ ಅಖಾಡಕ್ಕೆ ಧುಮುಕುವ ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ:ಅಡ್ವಾನ್ಸ್ ಬುಕ್ಕಿಂಗ್ನಲ್ಲಿ 'ಡಂಕಿ' ಮೀರಿಸಿದ 'ಸಲಾರ್'; ಭಾರತದಲ್ಲೇ ₹1.55 ಕೋಟಿ ಕಲೆಕ್ಷನ್