ಈ ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಅನ್ನೋದು ಕೆಲ ನಟರಲ್ಲಿ ಆಸೆ ಇರುತ್ತೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ. ಅವತಾರ ಪುರುಷ ಸಿನಿಮಾ ಬಳಿಕ ಇದೀಗ ಮಾದೇವ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ವಿಲನ್ ಆಗಿ ನಟಿಸುತ್ತಿದ್ದಾರೆ.
ನಿರ್ದೇಶಕ ನವೀನ್ ರೆಡ್ಡಿ ಬಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಮಾದೇವ ಸಿನಿಮಾ ಅಖಾಡಕ್ಕೆ ಇದೀಗ ಶ್ರೀನಗರ ಕಿಟ್ಟಿ ಎಂಟ್ರಿ ಕೊಟ್ಟಿದ್ದಾರೆ. 80 ರ ದಶಕದ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿದ್ದು, ವಿನೋದ್ ಎದುರು ಶ್ರೀನಗರ ಕಿಟ್ಟಿ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ಸಮುದ್ರ ಎಂಬ ಪವರ್ ಫುಲ್ ಪಾತ್ರದ ಮೂಲಕ ಶ್ರೀನಗರ ಕಿಟ್ಟಿ ಗ್ಯಾಂಗ್ ಸ್ಟಾರ್ ಆಗಿ ಅಬ್ಬರಿಸಲಿದ್ದಾರೆ.