ಕರ್ನಾಟಕ

karnataka

ETV Bharat / entertainment

ಫಿಲ್ಮ್ ಚೇಂಬರ್ ಚುನಾವಣೆ: ಸದಸ್ಯರ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶ್ರೀನಿವಾಸ್- ₹10 ಲಕ್ಷ ಮೀಸಲು - Film Chamber election

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರ ಕುಟುಂಬ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಅನ್ನು ನಿರ್ಮಾಪಕ ಹಾಗು ವಿತರಕ ಶ್ರೀನಿವಾಸ್ (ಶಿಲ್ಪಾ) ಆರಂಭಿಸಿದ್ದಾರೆ.

Srinivas started the Film Chamber Members Welfare Trust
ಫಿಲ್ಮ್ ಚೇಂಬರ್ ಚುನಾವಣೆ: ಸದಸ್ಯರ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶ್ರೀನಿವಾಸ್

By ETV Bharat Karnataka Team

Published : Sep 22, 2023, 12:38 PM IST

Updated : Sep 22, 2023, 12:51 PM IST

ಸದಸ್ಯರ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶ್ರೀನಿವಾಸ್

ಕನ್ನಡ ಚಿತ್ರರಂಗದ ಮಾತೃ ಸಂಸ್ಥೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್​​ 23ಕ್ಕೆ ಅಂದರೆ ನಾಳೆ, ಶನಿವಾರ ಫಿಲ್ಮ್ ಚೇಂಬರ್ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಕಂ ವಿತರಕ ಶ್ರೀನಿವಾಸ್ (ಶಿಲ್ಪಾ) ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಈಗಾಗಲೇ ಭರದ ಪ್ರಚಾರ ನಡೆಸಿರುವ ಶಿಲ್ಪಾ ಶ್ರೀನಿವಾಸ್ ಅವರಿಗೆ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಂಡ ಸೇರಿದಂತೆ ಹಲವರು ಸಾಥ್ ಕೊಟ್ಟಿದ್ದಾರೆ.

ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್- ₹10 ಲಕ್ಷ ಮೀಸಲು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರ ಕುಟುಂಬ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿರುವ ಶಿಲ್ಪಾ ಶ್ರೀ‌ನಿವಾಸ್, ಅದಕ್ಕಾಗಿ 10 ಲಕ್ಷ ರೂ ಮೀಸಲಿಟ್ಟಿದ್ದಾರೆ. ಇಡೀ ಚಿತ್ರೋದ್ಯಮಕ್ಕೆ ಈ ಟ್ರಸ್ಟ್ ಬೆಳಕಾಗಲಿ, ಯಾರೇ ಅಧ್ಯಕ್ಷರು ಬಂದರೂ ಇದನ್ನು ಮುಂದುವರೆಸಿಕೊಂಡು ಹೋಗಲಿ, ತಾವು ಮಂಡಳಿ ಅಧ್ಯಕ್ಷ ಸ್ಥಾನಕ್ಕೇರಿದರೆ ಮೊದಲು ಇದನ್ನು ಜಾರಿಗೆ ತರುತ್ತೇವೆ ಎಂದು ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಿಲ್ಪಾ ಶ್ರೀನಿವಾಸ್, 1976ರಿಂದ ಚಿತ್ರರಂಗದಲ್ಲಿ ಸಕ್ರಿಯನಾಗಿದ್ದೇನೆ. ನಿರ್ಮಾಪಕನಾಗಿ, ವಿತರಕನಾಗಿ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಈ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದರು.

ಇದನ್ನೂ ಓದಿ:RRR ಖ್ಯಾತಿಯ ಕೀರವಾಣಿ ಜೊತೆ ಅನುಪಮ್​​​​ ಖೇರ್: ಸಂಗೀತಾಭ್ಯಾಸದ ಸ್ಪೆಷಲ್​ ವಿಡಿಯೋ

ಭಾ.ಮಾ ಹರೀಶ್ ಮಾತನಾಡಿ, ಕಳೆದ 40 ವರ್ಷಗಳಿಂದ ಕನ್ನಡ ಚಲನಚಿತ್ರರಂಗದಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಶ್ರೀನಿವಾಸ್, 600ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ , ಶಂಕರ್‌ನಾಗ್, ಅಂಬರೀಶ್, ಶಿವಣ್ಣ ಜೊತೆ ಕೆಲಸ ಮಾಡಿರುವ ಅವರು, ಪ್ರಜಾಪ್ರಭುತ್ವ, ಪರ್ವ, ರೋಮಿಯೋ ಜೂಲಿಯೆಟ್, ಉಪೇಂದ್ರ ಅಂತಹ ಇನ್ನೂ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕ, ವಿತರಕ, ಹಂಚಿಕೆದಾರನಾಗಿ ಇಲ್ಲಿಯವರೆಗೂ ಚಿತ್ರರಂಗದಲ್ಲಿ ಶ್ರಮಿಸಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಶಿಲ್ಪಾ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಿ ಅಂತಾ ಕೇಳಿಕೊಂಡರು.

ಇದನ್ನೂ ಓದಿ:ಕರೀನಾ, ವಿಜಯ್​ ವರ್ಮಾ, ಜೈದೀಪ್​ ಅಹ್ಲಾವತ್​ ನಟನೆಯ 'ಜಾನೆ ಜಾನ್​' ಬಿಡುಗಡೆ: ಹೇಗಿದೆ ಸಿನಿಮಾ?

Last Updated : Sep 22, 2023, 12:51 PM IST

ABOUT THE AUTHOR

...view details