ಮೋಹಕ ತಾರೆ ರಮ್ಯಾ ನಿರ್ಮಾಣದ ತಮ್ಮ 'ಆಪಲ್ ಬಾಕ್ಸ್ ಸ್ಟುಡಿಯೋಸ್' ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’. 'ಒಂದು ಮೊಟ್ಟೆಯ ಕಥೆ', 'ಟೋಬಿ' ಖ್ಯಾತಿಯ ಪ್ರತಿಭಾವಂತ ನಟ ರಾಜ್.ಬಿ.ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಸಿನಿ ರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರವೊಂದರಲ್ಲಿ ಇದೂ ಒಂದು. ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ ಈ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲ ರಮ್ಯಾ 'ಲೈಟರ್ ಬುದ್ಧ ಫಿಲಂಸ್' ಸಂಸ್ಥೆಯೊಂದಿಗೆ ಕೈ ಜೋಡಿಸಿದ್ದಾರೆ. ಈ ಚಿತ್ರವನ್ನು ನಟ-ನಿರ್ದೇಶಕ ರಾಜ್.ಬಿ.ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿದ್ದು, ಅವರೊಂದಿಗೆ ಸಿರಿ ರವಿಕುಮಾರ್ ಕೂಡ ಕಾಣಿಸಿಕೊಳ್ಳಲಿದ್ದಾರೆ.
ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಗಾಗಿ ಇಡೀ ಕರುನಾಡ ಸಿನಿ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದರು. ಕೊನೆಗೂ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ರಾಜ್.ಬಿ.ಶೆಟ್ಟಿ, "ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು! ನಮ್ಮ ಚಿತ್ರ "ಸ್ವಾತಿ ಮುತ್ತಿನ ಮಳೆ ಹನಿಯೇ" ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆ" ಎಂದು ಬರೆದುಕೊಂಡಿದ್ದಾರೆ. ಚಿತ್ರವು ಮುಂದಿನ ತಿಂಗಳ 24ರಂದು ತೆರೆ ಕಾಣಲಿದೆ.
ಇದನ್ನೂ ಓದಿ:'ರಾಜಹಂಸ' ಬಿಟ್ಟು ಮಲೆನಾಡಿನ 'ಕೆರೆಬೇಟೆ'ಗೆ ಬಂದ್ರು ಗೌರಿ ಶಂಕರ್