ನಟಿ ರಮ್ಯಾ ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಈ ಚಿತ್ರ ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ತಲುಪಿದ್ದು, ಚಿತ್ರದ ಕೆಲವೊಂದು ಫೋಟೋಗಳು ಹೊರ ಬಿದ್ದಿವೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಸಿರಿ ಜೊತೆ ರಾಜ್ ಬಿ ಶೆಟ್ಟಿ ರೊಮ್ಯಾನ್ಸ್ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ನಿರ್ಮಾಣದ ಜೊತೆಗೆ ಹೀರೋಯಿನ್ ಆಗುವ ಮೂಲಕ ಸೆಕೆಂಡ್ ಇನಿಂಗ್ಸ್ ಶುರು ಮಾಡಬೇಕೆಂದಿದ್ದರು. ಆಪಲ್ ಬಾಕ್ಸ್ ಸ್ಟುಡಿಯೊಸ್ ಎಂಬ ತಮ್ಮದೇ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಘೋಷಿಸಿದ್ದ ನಟಿ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಬಣ್ಣ ಹಚ್ಚುವುದರ ಜತೆಗೆ ಬಂಡವಾಳವನ್ನೂ ಸಹ ಹಾಕಲಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು. ಆದರೆ ಕೆಲ ದಿನಗಳ ಬಳಿಕ ಈ ಚಿತ್ರದಲ್ಲಿ ರಮ್ಯಾ ಕೇವಲ ನಿರ್ಮಾಪಕಿಯಾಗಿ ಕೆಲಸ ನಿರ್ವಹಿಸಲಿದ್ದು, ರಮ್ಯಾ ನಿರ್ವಹಿಸಬೇಕಿದ್ದ ಪಾತ್ರದಲ್ಲಿ ಸಿರಿ ರವಿಕುಮಾರ್ ನಟಿಸಲಿದ್ದಾರೆ ಎಂಬ ಸುದ್ದಿ ಹೊರಬಿತ್ತು.
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಸಿರಿ ಜೊತೆ ರಾಜ್ ಬಿ ಶೆಟ್ಟಿ ರೊಮ್ಯಾನ್ಸ್ ಒಂದು ಮೊಟ್ಟೆಯ ಕಥೆ ಸಿನಿಮಾ ಖ್ಯಾತಿಯ ರಾಜ್ ಬಿ ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ಸಿರಿ ರವಿಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಸದ್ಯ ಈ ಚಿತ್ರದ ಕೆಲವೊಂದು ಫೋಟೋಗಳು ರಿವೀಲ್ ಆಗಿದ್ದು, ಸಿರಿ ಜೊತೆ ರಾಜ್ ಬಿ ಶೆಟ್ಟಿ ರೊಮ್ಯಾಟಿಂಕ್ ಆಗಿ ಕಾಣಿಸಿಕೊಂಡಿದ್ದಾರೆ.
ಇನ್ನುಳಿದಂತೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್, ಗೋಪಾಲ್‌ಕೃಷ್ಣ ದೇಶಪಾಂಡೆ ಇನ್ನುಳಿದ ತಾರಾಗಣದಲ್ಲಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಸಿರಿ ಜೊತೆ ರಾಜ್ ಬಿ ಶೆಟ್ಟಿ ರೊಮ್ಯಾನ್ಸ್ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್‌ಸ್ಟೋರಿ. ಒಂದು ಭಾವುಕ ಪ್ರಯಾಣ. ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಿಷ್ಟು ಎಕ್ಸ್‌ಕ್ಲೂಸಿವ್ ಫೋಟೋಗಳು ಹೊರಬಿದ್ದಿವೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಸಿರಿ ಜೊತೆ ರಾಜ್ ಬಿ ಶೆಟ್ಟಿ ರೊಮ್ಯಾನ್ಸ್ ಇನ್ನು ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಮೂಲಕ ರಮ್ಯಾ ಅವರ ಕಮ್ ಬ್ಯಾಕ್ ಚಿತ್ರವಾಗಬೇಕಿತ್ತು. ಆದಾಗ್ಯೂ, ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಲಾಯಿತ್ತು. ಸದ್ಯ ಚಿತ್ರೀಕರಣ ಮುಗಿಸಿರೋ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರತಂಡ ಹೊಸ ವರ್ಷಕ್ಕೆ ಟೀಸರ್ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಸಿರಿ ಜೊತೆ ರಾಜ್ ಬಿ ಶೆಟ್ಟಿ ರೊಮ್ಯಾನ್ಸ್ ಓದಿ:ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ನಾಯಕಿ ನಟಿ ಪರಿಚಯ