ಕರ್ನಾಟಕ

karnataka

ETV Bharat / entertainment

ಹೊಸ ಪ್ರತಿಭೆಗಳು ಹೊತ್ತು ತಂದ ಸಿರಿ ಲಂಬೋದರ ವಿವಾಹ ಟೀಸರ್​ಗೆ ರಮೇಶ್ ಅರವಿಂದ್ ಫಿದಾ - ETv Bharat Karnataka

ಹೊಸ ಪ್ರತಿಭೆಗಳು ಸೇರಿ ಮಾಡಿರುವ ಸಿರಿ ಲಂಬೋದರ ವಿವಾಹ ಚಿತ್ರದ ಟೀಸರ್​ಗೆ ಹಿರಿಯ ನಟ ರಮೇಶ್ ಅರವಿಂದ್ ಫಿದಾ ಆಗಿದ್ದಾರೆ.

Siri Lambodar Wedding Movie Team
ಸಿರಿ ಲಂಬೋದರ ವಿವಾಹ ಚಿತ್ರ ತಂಡ

By

Published : Nov 21, 2022, 1:42 PM IST

ದಿನೇ ದಿನೇ ಹೊಸ‌ ಪ್ರತಿಭೆಗಳು ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಾನೆ‌ ಇದ್ದಾರೆ‌. ಇದೀಗ ಪಾಪ ಪಾಂಡು ಸೀರಿಯಲ್ ಖ್ಯಾತಿಯ ಸೌರಭ್ ಕುಲಕರ್ಣಿ ನಟನೆ ಅಲ್ಲದೇ ನಿರ್ದೇಶಕರಾಗುತ್ತಿದ್ದಾರೆ‌. ಸಿರಿ ಲಂಬೋದರ ವಿವಾಹ (ಎಸ್ ಎಲ್ ವಿ) ಚಿತ್ರವನ್ನು ಸೌರಭ್ ಕುಲಕರ್ಣಿ ನಿರ್ದೇಶನ ಮಾಡಿದ್ದು, ಈ ಚಿತ್ರದ ಟೀಸರ್ ಅನಾವರಣ ಮಾಡಿದ ಹಿರಿಯ ನಟ ರಮೇಶ್ ಅರವಿಂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌.

ನಿರ್ದೇಶಕ ಸೌರಭ್ ಕುಲಕರ್ಣಿ ಈ ಚಿತ್ರದ ಕೆಲವೊಂದು ವಿಚಾರಗಳನ್ನು ಮಾತನಾಡಿದರು. ಈ ಚಿತ್ರ ಕಮರ್ಷಿಯಲ್ ಎಂಟರ್ಟೈನ್ಮೆಂಟ್ ವಿತ್ ಸಸ್ಪೆನ್ಸ್ ಥ್ರಿಲ್ಲರ್ ಆಗಿದ್ದು, ಸಿರಿ ಹಾಗೂ ಲಂಬೋದರ ಈ ಚಿತ್ರದ ನಾಯಕ, ನಾಯಕಿ ಅಲ್ಲ. "ಸಿರಿ ಹಾಗೂ ಲಂಬೋದರ" ಯಾರು ಎಂದು ತಿಳಿಯಲು ಚಿತ್ರ ನೋಡಬೇಕು ಎಂದು ಹೇಳಿದರು. ರಂಗಭೂಮಿ ಕಲಾವಿದರೇ ಹೆಚ್ಚಾಗಿ ಚಿತ್ರದಲ್ಲಿ ಅಭಿನಯಿಸಿದ್ದು, ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ. ಇನ್ನೆರಡು ತಿಂಗಳಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ ಎಂದರು. ಮತ್ತೊಂದು ಖುಷಿಯ ವಿಚಾರವೆಂದರೆ, ಡಿಸೆಂಬರ್ ನಲ್ಲಿ ಓಮನ್ ಹಾಗೂ ದುಬೈ ದೇಶಗಳಲ್ಲಿ ನಮ್ಮ ಚಿತ್ರದ ಪ್ರೀಮಿಯರ್ ನಡೆಯಲಿದೆ. ನಾನು ಸೇರಿದಂತೆ ಅನೇಕ ಸಿನಿಮಾಸಕ್ತರು ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೀವಿ ಎಂದು ತಮ್ಮ ಚಿತ್ರದ ಬಗ್ಗೆ ಹೇಳಿದರು. ಇನ್ನು, ಟೀಸರ್ ಬಿಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಧನ್ಯವಾದ ಎಂದು ತಿಳಿಸಿದರು.

ಪಾಪಾ ಪಾಂಡು ಸೀರಿಯಲ್​ನಲ್ಲಿ ಗಮನ ಸೆಳೆದ ಅಂಜನ್ ಎ ಭಾರದ್ವಾಜ್ ಈ ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ‌. ತಮ್ಮ ಪಾತ್ರದ ಬಗ್ಗೆ ಅಂಜನ್ ಮಾತನಾಡಿ, ನಾವು ಇಡೀ ತಂಡ ಮೂಲತಃ ರಂಗಭೂಮಿ ಅವರು.‌ ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ಧವಾಗಿದೆ ಎಂದರು. ನಾನು ಚಿತ್ರದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದು ಹೇಳಿದರು.

ಚಿತ್ರದ ನಾಯಕಿ ದಿಶಾ ರಮೇಶ್ ಮಾತನಾಡಿ, ನಾನು ಈ ಹಿಂದೆ ಬಿ.ಸುರೇಶ್ ಅವರ "ದೇವರ ನಾಡಲ್ಲಿ" ಚಿತ್ರದಲ್ಲಿ ಅಭಿನಿಯಿಸಿದ್ದೆ. ಆನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸೌರಭ್ ಹಾಗೂ ತಂಡದವರು ಮಾಡಿರುವ ಕಥೆ ಚೆನ್ನಾಗಿದೆ. ನನ್ನ ಪಾತ್ರಕೂಡ ಅಷ್ಟೇ ಚೆನ್ನಾಗಿದೆ ಎಂದರು.

ರಾಜೇಶ್ ನಟರಂಗ, ಸುಂದರ್ ವೀಣಾ, ಪಿ.ಡಿ. ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಕಿಟ್ಟಿ ಕೌಶಿಕ್ ಛಾಯಾಗ್ರಹಣವಿದ್ದು ಸಂಘರ್ಷ್ ಕುಮಾರ್ ಸಂಗೀತ ನೀಡಿದ್ದಾರೆ. ವೆರ್ಸಾಟಾ ವೆಂಟುರ್ಸ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕಿಯಾಗಿ ನಮ್ರತಾ ಕೆಲಸ ಮಾಡಿದ್ದಾರೆ. ಟೀಸರ್ ನಿಂದಲೇ ಗಮನ ಸೆಳೆಯುತ್ತಿರೋ ಸಿರಿ ಲಂಬೋದರ ವಿವಾಹ ಟ್ರೇಲರ್ ಬಿಡುಗಡೆ ಮಾಡಿದ ಬಳಿಕ ಪ್ರೇಕ್ಷಕರ ಮುಂದೆ ಬರಲಿದೆ.

ಇದನ್ನೂ ಓದಿ :ವಿನಯ್‌ ರಾಜ್‌ಕುಮಾರ್‌ ಅಭಿನಯದ 'ಪೆಪೆ' ಮುಂದಿನ ವರ್ಷ ತೆರೆಗೆ

ABOUT THE AUTHOR

...view details