ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಬಹುನಿರೀಕ್ಷಿತ ಲೈಗರ್ ಸಿನಿಮಾ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ಸಂದರ್ಭದಲ್ಲಿ ವಿಜಯ್ ದೇವರಕೊಂಡ ಅವರು ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಟಿ ಅನನ್ಯಾ ಪಾಂಡೆ ಜತೆಗಿದ್ದರು. ಪರಭಾಷೆಯ ಯಾವುದೇ ನಟರು ನಗರಕ್ಕೆ ಆಗಮಿಸಿದಾಗ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡುವರು.
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ತೆಲುಗು ನಟ ವಿಜಯ್ ದೇವರಕೊಂಡ - ಲೈಗರ್ ಸಿನಿಮಾ
ತೆಲುಗು ನಟ ವಿಜಯ್ ದೇವರಕೊಂಡ ಅವರು ಬೆಂಗಳೂರಿನಲ್ಲಿರುವ ದಿ.ಪುನೀತ್ ರಾಜ್ಕುಮಾರ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ತೆಲುಗು ನಟ ವಿಜಯ್ ದೇವರಕೊಂಡ
ಲೈಗರ್ ಸಿನಿಮಾ ಆಗಸ್ಟ್ 25ರಂದು ತೆರೆಗೆ ಬರಲಿದೆ. ನಿರ್ದೇಶಕ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್ ಮೈಕ್ ಟೈಸನ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:ಶಿವ 143 ಸಿನಿಮಾ ಪ್ರಚಾರ..ಮಾವ ಪುನೀತ್ ಮೆಚ್ಚಿನ ಅಂಜನಾದ್ರಿ ದೇಗುಲಕ್ಕೆ ಅಳಿಯ ಭೇಟಿ
Last Updated : Aug 19, 2022, 4:22 PM IST