ಡೆಡ್ಲಿ ಸೋಮ, ಎದೆಗಾರಿಕೆ, ಬೆಂಗಳೂರು ಅಂಡರ್ ವರ್ಲ್ಡ್ ಅಂತಹ ಸಿನಿಮಾಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಆದಿತ್ಯ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಸದ್ಯ ಈ ಚಿತ್ರಕ್ಕೆ ಟೆರರ್ ಅಂತಾ ಟೈಟಲ್ ಇಡಲಾಗಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ.
ಉಪೇಂದ್ರ ಅಭಿನಯದ "A" ಚಿತ್ರ ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳನ್ನು ನಿರ್ಮುಸಿರುವ ಸಿಲ್ಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಜನ್ ಶಿವರಾಮ ಗೌಡ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಜವಾಬ್ದಾರಿ ಕೂಡ ರಂಜನ್ ಅವರದ್ದೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.