ಕರ್ನಾಟಕ

karnataka

ETV Bharat / entertainment

ದಿ ಗೋಟ್ ಲೈಫ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ಕನ್ನಡದಲ್ಲಿ ಬರಲಿದೆ ನೈಜ ಘಟನೆಯ ಗೋಟ್ ಲೈಫ್

The Goat Life Movie: ಬರಹಗಾರ ಬೆನ್ಯಾಮಿನ್ ಅವರು ಬರೆದಿರುವ ಮಲಯಾಳಂ ಸಾಹಿತ್ಯ ಪ್ರಪಂಚದ ಅತ್ಯಂತ ಜನಪ್ರಿಯ ಕಾದಂಬರಿ 'ಆಡು ಜೀವಿತಂ' ಅನ್ನು ಆಧರಿಸಿ 'ದಿ ಗೋಟ್ ಲೈಫ್' ಸಿನಿಮಾ ತಯಾರಾಗಿದೆ.

By ETV Bharat Karnataka Team

Published : Dec 2, 2023, 7:49 AM IST

the goat life movie release date announced
ದಿ ಗೋಟ್ ಲೈಫ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್, ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಇದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಸಿನಿಮಾ. ಈ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ನೈಜ ಕಥೆ ಆಧರಿಸಿದ ಈ ಕಾದಂಬರಿ ದೃಶ್ಯ ರೂಪಕ್ಕೆ ಬಂದಿದೆ.

ಈ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ಅಲ್ಲದೇ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಟ್ ಲೈಫ್ ಸಿನಿಮಾಗೆ ಅಕಾಡೆಮಿ ಪ್ರಶಸ್ತಿ ವಿಜೇತರಾದ ಎ.ಆರ್. ರೆಹಮಾನ್ ಮತ್ತು ರೆಸುಲ್ ಪೂಕುಟ್ಟಿ ಅವರ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವಿದೆ.

ದಿ ಗೋಟ್ ಲೈಫ್ ಪೋಸ್ಟರ್​

ಚಿತ್ರದ ಅದ್ಭುತ ದೃಶ್ಯಗಳನ್ನು ಸುನಿಲ್ ಕೆ.ಎಸ್ ತಮ್ಮ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದು, ಶ್ರೀಕರ್ ಪ್ರಸಾದ್ ಸಂಕಲನವಿದೆ. ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರ ಮಲಯಾಳಂ ಚಿತ್ರೋದ್ಯಮದ ಅತಿದೊಡ್ಡ ಸಿನಿಮಾ ಎನಿಸಿದೆ. ಅ‌ಂದಹಾಗೆ ಈ ಚಿತ್ರ ಮಲಯಾಳಂ ಸಾಹಿತ್ಯ ಪ್ರಪಂಚದ ಅತ್ಯಂತ ಜನಪ್ರಿಯ ಕಾದಂಬರಿ 'ಆಡು ಜೀವಿತಂ' ಅನ್ನು ಆಧರಿಸಿದೆ. ಇದು ವಿದೇಶಿ ಸೇರಿದಂತೆ 12 ವಿವಿಧ ಭಾಷೆಗಳಲ್ಲಿ ಅನುವಾದಗೊಂಡಿದೆ.

ಬರಹಗಾರ ಬೆನ್ಯಾಮಿನ್ ಬರೆದಿರುವ ಈ ಕಾದಂಬರಿ 90 ರ ದಶಕದಲ್ಲಿ ಅದೃಷ್ಟ ಹುಡುಕಿ ವಲಸೆ ಬಂದ ನಜೀಬ್ ಎಂಬ ಯುವಕನ ನೈಜ ಕಥೆಯನ್ನು ಒಳಗೊಂಡಿದೆ. ಈ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಬ್ಲೆಸ್ಸಿ, "ದಿ ಗೋಟ್ ಲೈಫ್ ಎಲ್ಲೆಡೆ ಸಲ್ಲುವ ಕಥೆ. ನಿರೂಪಣೆ ಸಲುವಾಗಿ ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡಿದ್ದೇನೆ. ಕಾದಂಬರಿಯನ್ನು ಸಿನಿಮಾ ಮಾಡುವಾಗ ಅನೇಕ ಸವಾಲು ಎದುರಾದವು. ಪ್ರೇಕ್ಷಕರಿಗೆ ಒಳ್ಳೆಯ ಸಿನಿಮಾ ಕೊಡುವ ಪ್ರಯತ್ನ ಮಾಡಿದ್ದೇನೆ ಎಂದಿದ್ದಾರೆ.

ದಿ ಗೋಟ್ ಲೈಫ್ ಸಿನಿಮಾ ಶೂಟಿಂಗ್​ ಸೆಟ್​

ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ನು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಅಂದಹಾಗೆ, ಗೋಟ್ ಲೈಫ್ ಸಿನಿಮಾ 2024ರ ಏಪ್ರಿಲ್ 10 ರಂದು ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ:ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಕಥೆ '800': ಬೆಂಗಳೂರಿಗೆ ಬಂದ ಶ್ರೀಲಂಕಾ ಕ್ರಿಕೆಟಿಗ

ABOUT THE AUTHOR

...view details