ಕನ್ನಡ ಚಿತ್ರರಂಗದ ಶೋ ಮ್ಯಾನ್ ರವಿಚಂದ್ರನ್ ಸದ್ಯ ರಿಯಾಲಿಟಿ ಶೋ ಹಾಗು 'ದ ಜಡ್ಜ್ಮೆಂಟ್' ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈಗಾಗಲೇ ವಕೀಲನ ಪಾತ್ರದಲ್ಲಿ ಬೆಳ್ಳಿ ತೆರೆ ಮೇಲೆ ಮೋಡಿ ಮಾಡಿರೋ ರವಿಮಾಮ ಮತ್ತೆ ಕರಿ ಕೋಟ್ ಧರಿಸಿ ನಟಿಸುತ್ತಿರುವ ಚಿತ್ರವೇ 'ದ ಜಡ್ಜ್ಮೆಂಟ್. ಈ ಚಿತ್ರ ಒಂದಲ್ಲ ಒಂದು ವಿಚಾರಕ್ಕೆ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ.
ದ ಜಡ್ಜ್ಮೆಂಟ್ ಶೂಟಿಂಗ್:'ದ ಜಡ್ಜ್ಮೆಂಟ್' ಸಿನಿಮಾದ ಮಧ್ಯಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು. ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್, ಸುಜಯ್ ಶಾಸ್ತ್ರಿ, ಜಗದೀಶ್ ಮಲ್ನಾಡ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ ಮತ್ತು ಅರವಿಂದ್ ಕುಪ್ಳೀಕರ್ ಮುಂತಾದ ನುರಿತ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗುರುರಾಜ ಕುಲಕರ್ಣಿ ನಿರ್ದೇಶನದಲ್ಲಿ, ಅನುಭವಿ ಪಿ.ಕೆ.ಹೆಚ್ ದಾಸ್ ಮೂರು ಕ್ಯಾಮರಾಗಳನ್ನು ಬಳಸಿಕೊಂಡು ಕ್ಲೈಮ್ಯಾಕ್ಸ್ ಭಾಗವನ್ನು ಚಿತ್ರೀಕರಣ ಮಾಡಿದರು.
ದ ಜಡ್ಜ್ಮೆಂಟ್ ಸಿನಿಮಾ ಲೀಗಲ್ ಥ್ರಿಲ್ಲರ್ ಶೈಲಿಯದಾಗಿದ್ದು, ನ್ಯಾಯಾಂಗದ ಸುತ್ತ ನಡೆಯುವ ಘಟನೆಗಳನ್ನು ಬಳಸಿಕೊಂಡು ಕಾಲ್ಪನಿಕ ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡಲಿದೆ ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ತಿಳಿಸಿದ್ದಾರೆ.
'ದ ಜಡ್ಜ್ಮೆಂಟ್' ಚಿತ್ರತಂಡ ದ ಜಡ್ಜ್ಮೆಂಟ್ ಕಾಸ್ಟ್..ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್ ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಮ್, ಬಾಲಾಜಿ ಮನೋಹರ್, ಅರವಿಂದ್ ಕುಪ್ಳೀಕರ್ ಮತ್ತು ಜಗದೀಶ್ ಮಲ್ನಾಡ್ ಸೇರಿದಂತೆ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ:ಶೈನ್ ಶೆಟ್ಟಿಯ 'ಜಸ್ಟ್ ಮ್ಯಾರಿಡ್'ಗೆ ನಿರ್ಮಾಪಕರಾದ ಅಜನೀಶ್ ಲೋಕನಾಥ್: ಸಿ.ಆರ್ ಬಾಬಿ ನಿರ್ದೇಶನದಲ್ಲಿ ಸಿನಿಮಾ
ಚಿತ್ರತಂಡ ಕುರಿತು..ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ ಇದ್ದು, ಪ್ರಮೋದ್ ಮರವಂತೆ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಜಿ9 ಕಮ್ಯೂನಿಕೇಷನ್ ಮೀಡಿಯಾ ಆ್ಯಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ವಿಶ್ವನಾಥ ಗುಪ್ತಾ, ರಾಮು ರಾಯಚೂರು ಮತ್ತು ರಾಜಶೇಖರ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಅದ್ಧೂರಿ ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿರೋ ದಿ ಜಡ್ಜ್ಮೆಂಟ್ ಸಿನಿಮಾ ಶೀಘ್ರದಲ್ಲೇ ತೆರೆಕಾಣಲಿದೆ.
ಇದನ್ನೂ ಓದಿ:ಅಂಬಾನಿ ನಿವಾಸದಲ್ಲಿ ಗಣೇಶ ಚತುರ್ಥಿ ವೈಭವ: ಬಾಲಿವುಡ್ ತಾರೆಯರ ಸಮಾಗಮ Photos ನೋಡಿ