ಪರಭಾಷೆಯ ಚಿತ್ರಗಳು ಕನ್ನಡದಲ್ಲಿ ಡಬ್ಬಿಂಗ್ ಮಾಡಿ ಬಿಡುಗಡೆ ಆಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿವೆ. ಈ ಸಾಲಿನಲ್ಲಿ 'ದಿ ಲೆಜೆಂಡ್' ಎಂಬ ಸಿನಿಮಾ ಕೂಡ ಒಂದು. ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮಗಳೊಂದಿಗೆ ಮಾತನಾಡಿ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿದ್ದಾರೆ.
ನಾಯಕ ಸರವಣನ್ ಮಾತನಾಡಿ, ಸಿನಿಮಾ ಮಾಡಬೇಕು ಎಂಬ ಕನಸ್ಸು ಚಿಕ್ಕ ವಯಸ್ಸಿನಿಂದ ಇತ್ತು. ಬ್ಯುಸಿನೆಸ್ ಮೇಲೆ ಹೆಚ್ಚು ಫೋಕಸ್ ಇತ್ತು. ಎಲ್ಲಾ ಸೆಟಲ್ಡ್ ಆದ ಮೇಲೆ ಸಿನಿಮಾ ಮಾಡಿದ್ದೇನೆ. ಕಳೆದ ಹದಿನೈದು ವರ್ಷದಿಂದ ನಿರ್ದೇಶಕ ಜೆ. ಡಿ ಜೆರ್ರಿ ನನ್ನ ಜೊತೆ ಇದ್ದಾರೆ. ಪ್ರತಿಯೊಂದು ದೃಶ್ಯವೂ ಅದ್ಭುತವಾಗಿ ಮೂಡಿ ಬಂದಿದೆ ಎಂದರು.