ಮಾಫಿಯಾ ಚಿತ್ರ ತನ್ನ ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಸೌಂಡ್ ಮಾಡುತ್ತಿರುವ ಚಿತ್ರ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮಾಫಿಯಾ ಚಿತ್ರದ ನೂತನ ಪೋಸ್ಟರ್ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಿದೆ. ವಿಭಿನ್ನ ಪೋಸ್ಟರ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ್ಯಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿರುವ ಈ ಚಿತ್ರ, ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಸಿನಿಮಾ.
ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ನಲ್ಲಿ ಪ್ರಜ್ವಲ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ಸಾಕಷ್ಟು ತಯಾರಿ ಮಾಡಿಕೊಂಡು ಇದರಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ದೀಪಾವಳಿ ನಂತರ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಮಾಫಿಯಾಗಾಗಿ ಹೈದರಾಬಾದ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ಧೂರಿ ಸೆಟ್ ಸಹ ನಿರ್ಮಾಣ ಮಾಡಲಾಗಿತ್ತು.