'ಉಸಿರಿಗಿಂತ ನೀನೆ ಹತ್ತಿರ' ಸಿನಿಮಾ ಮೂಲಕ ಕನ್ನಡಕ್ಕೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಬ್ಯೂಟಿಫುಲ್ ನಟಿ ಎಸ್ತರ್ ನರೋನ. ಇವರ ಹೆಸರು ಕೇಳುತ್ತಿದ್ದಂತೆ ಶಕೀಲಾ, ಲಂಕೆ ಹಾಗೂ ತೆಲುಗಿನ 69 ಸಂಸ್ಕಾರ ಕಾಲೋನಿ ಚಿತ್ರಗಳು ನೆನಪಾಗುತ್ತವೆ. ಈ ಚಿತ್ರಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು ಸಿನಿ ಪ್ರಿಯರ ಹೃದಯಬಡಿತ ಹೆಚ್ಚಿಸಿದ್ದ ಬೆಡಗಿ ಇದೀಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ನಿರ್ದೇಶಕಿಯಾಗಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.
ಹೌದು, ಎಸ್ತರ್ ನರೋನಾ ನಿರ್ದೇಶಕಿಯಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. 'ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ನರೋನಾ, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಚಿತ್ರ ಮಾಡುತ್ತಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ನರೋನಾ ನಿರ್ಮಾಣ, ಸಂಗೀತ, ಸಾಹಿತ್ಯ, ಕಥೆ, ಕಾಸ್ಟ್ಯೂಮ್ ಎಲ್ಲಾ ಜವಾಬ್ದಾರಿಯನ್ನೂ ತಾವೇ ಹೊತ್ತುಕೊಂಡಿದ್ದಾರೆ.
ಫಸ್ಟ್ ಲುಕ್ ಟೀಸರ್ ರಿಲೀಸ್: ಎಸ್ತಾರ್ ನರೋನಾ ಸಾರಥ್ಯದ ಚೊಚ್ಚಲ 'ದಿ ವೆಕೆಂಟ್ ಹೌಸ್' ಫಸ್ಟ್ ಲುಕ್ ಕೂಡ ಅನಾವರಣಗೊಂಡಿದೆ. ಎರಡು ಮುದ್ದಾದ ಜೋಡಿಗಳ ಸುಂದರ ಪ್ರೇಮಕಥೆಯ ಮೊದಲ ನೋಟ ನೋಡುಗರನ್ನು ಇಂಪ್ರೆಸ್ ಮಾಡುತ್ತಿದೆ. ಫಸ್ಟ್ ಲುಕ್ ಅನ್ನೇ ಚಿತ್ರತಂಡ ಟೀಸರ್ ಆಗಿ ಅನಾವರಣಗೊಳಿಸಿದೆ. ಅತ್ಯಂತ ಸುಂದರವಾಗಿ ಟೀಸರ್ ಮೂಡಿಬಂದಿದೆ. 3 ಲಕ್ಷಕ್ಕೂ ಅಧಿಕ ಜನರು ಈ ಟೀಸರ್ ಅನ್ನು ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ.
ಇದನ್ನೂ ಓದಿ:2ನೇ ಮಗುವಿನ ನಿರೀಕ್ಷೆಯಲ್ಲಿ ಧ್ರುವ ಸರ್ಜಾ ದಂಪತಿ - ಸ್ಪೆಷಲ್ ಪೋಸ್ಟ್ ಶೇರ್ ಮಾಡಿದ ಆ್ಯಕ್ಷನ್ ಪ್ರಿನ್ಸ್
ಎಸ್ತರ್ ನರೋನಾ ಬಗ್ಗೆ..: 'ಉಸಿರಿಗಿಂತ ನೀನೆ ಹತ್ತಿರ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಅಡಿಯಿಟ್ಟ ಎಸ್ತರ್ ನರೋನಾ ಮೂಲತಃ ಮಂಗಳೂರಿನವರು. ಆದರೆ ಇವರು ಬೆಳೆದಿದ್ದು ಮಾತ್ರ ಮುಂಬೈನಲ್ಲಿ. ಮೊದಲ ಬಾರಿಗೆ ಬಾಲಿವುಡ್ನಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು ಹಿಂದಿ ಚಿತ್ರರಂಗ ಪ್ರವೇಶಿಸಿದ ತಾರೆ ನಂತರ ತೆಲುಗು, ತುಳು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿದರು.
ಶೀಘ್ರದಲ್ಲೇ 'ದಿ ವೆಕೆಂಟ್ ಹೌಸ್' ತೆರೆಗೆ: ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಗ್ಲಾಮರ್ ಬ್ಯೂಟಿ ಎಸ್ತರ್ ನರೋನ ಇದೀಗ ಹೊಸ ಹೆಜ್ಜೆ ಇಟ್ಟಿದ್ದಾರೆ. 'ದಿ ವೆಕೆಂಟ್ ಹೌಸ್' ಸಿನಿಮಾವನ್ನು ಜೆನೆಟ್ ನರೋನಾ ಪ್ರೊಡಕ್ಷನ್‌ನಡಿ ನಿರ್ಮಾಣ ಮಾಡಲಾಗಿದ್ದು, ಬಹುತೇಕ ಚಿತ್ರೀಕರಣ ಮಂಗಳೂರಿನಲ್ಲಿ ಮಾಡಲಾಗಿದೆ. ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನವಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ 'ದಿ ವೆಕೆಂಟ್ ಹೌಸ್’ ಚಿತ್ರವನ್ನು ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ತೆರೆಗೆ ಬರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಇದನ್ನೂ ಓದಿ:ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಗಟ್ಟಿಮೇಳ ಧಾರಾವಾಹಿಯ ವೇದಾಂತ್: ಆ್ಯಕ್ಷನ್ ಕಟ್ ಹೇಳಲಿದ್ದಾರೆ ಜೇಮ್ಸ್ ಡೈರೆಕ್ಟರ್