ಟಾಲಿವುಡ್ ಸೂಪರ್ ಸ್ಟಾರ್ ರಾಮ್ ಚರಣ್ ಅಭಿನಯದ ಆರ್ಸಿ 15 ಸಿನಿಮಾ ಶೂಟಿಂಗ್ ಸದ್ಯ ನ್ಯೂಜಿಲೆಂಡ್ನಲ್ಲಿ ನಡೆಯುತ್ತಿದೆ. ನಟ ರಾಮ್ ಚರಣ್ ನ್ಯೂಜಿಲೆಂಡ್ ಸುತ್ತಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಡೈರೆಕ್ಟರ್ ಶಂಕರ್ ನಿರ್ದೇಶನದ 'RC15' ಸಿನಿಮಾ ಶೂಟಿಂಗ್ನ ಹೊಸ ಶೆಡ್ಯೂಲ್ ನ್ಯೂಜಿಲೆಂಡ್ನಲ್ಲಿ ಭರದಿಂದ ಸಾಗುತ್ತಿದೆ. ರಾಮ್ ಚರಣ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರೂ ದೇಶ ಸುತ್ತಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದಾರೆ. ರಾಮ್ ಚರಣ್ ನ್ಯೂಜಿಲೆಂಡ್‌ನ ಬೀದಿಗಳಲ್ಲಿ ತಮ್ಮ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ 'ಇನ್ನೂ ಆಲೋಚನೆಗಳಲ್ಲಿ' ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಬಾಲಿವುಡ್ ಬ್ಯೂಟಿ ಕತ್ರಿನಾ ಕೈಫ್ ಕೂಡ ಲೈಕ್ ಮಾಡಿದ್ದಾರೆ. ಹೊಸ ಲುಕ್ನಲ್ಲಿ ಕಾಣಿಸಿಕೊಂಡಿರುವ ರಾಮ್ ಚರಣ್ ಅಭಿಮಾನಿಗಳಲ್ಲಿ ಉತ್ಸಾಹ ತುಂಬಿದ್ದಾರೆ.