ಇತ್ತೀಚಿನ ದಿನಗಳಲ್ಲಿ ಸೌತ್ ಸಿನಿಮಾಗಳು ದೇಶ-ವಿದೇಶಗಳಲ್ಲಿ ಸಖತ್ ಸುದ್ದಿ ಮಾಡ್ತಿದೆ. ಕನ್ನಡ, ತೆಲುಗು, ಮಲಯಾಳಂ, ತಮಿಳಿನಲ್ಲಿ ಅತ್ಯುತ್ತಮ ಚಿತ್ರಗಳು ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಕನ್ನಡ ಚಿತ್ರರಂಗದ ಕೆಜಿಎಫ್ 2, 777 ಚಾರ್ಲಿ ಸಖತ್ ಸೌಂಡ್ ಮಾಡಿದೆ. ಬಾಲಿವುಡ್ ನಟರನ್ನೂ ಮೀರಿಸುವಂತಿದೆ ಸೌತ್ ನಟರ ಸೌಂಡ್. ಭಾರತದ ಎಲ್ಲಾ ಸ್ಟಾರ್ಸ್ಗೆ ರ್ಯಾಂಕಿಂಗ್ ನೀಡಲಾಗಿದೆ. ಒರ್ಮಾಕ್ಸ್ ಮೀಡಿಯಾ (Ormax media) ಈ ಬಗ್ಗೆ ಅಭಿಮಾನಿಗಳ ಅಭಿಪ್ರಾಯ ಸಂಗ್ರಹಿಸಿ ಪಟ್ಟಿ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಈ ಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಂಡಿರುವುದು ಹೆಮ್ಮೆಯ ವಿಷಯ.
ಟಾಪ್ 10 ಜನಪ್ರಿಯ ನಟರ ಪಟ್ಟಿ ಅಲ್ಲಿ ತಮಿಳಿನ ದಳಪತಿ ವಿಜಯ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಪ್ರಭಾಸ್, 3ನೇ ಸ್ಥಾನದಲ್ಲಿ ಜೂನಿಯರ್ ಎನ್ಟಿಆರ್, 4ನೇ ಸ್ಥಾನದಲ್ಲಿ ಅಲ್ಲು ಅರ್ಜುನ್ ಇದ್ದಾರೆ. 5ನೇ ಸ್ಥಾನದಲ್ಲಿ ರಾಕಿಂಗ್ ಸ್ಟಾರ್ ಯಶ್ ಇದ್ದರೆ, 6ನೇ ಸ್ಥಾನದಲ್ಲಿ ರಾಮ್ ಚರಣ್, 7ನೇ ಸ್ಥಾನದಲ್ಲಿ ಅಕ್ಷಯ್ ಕುಮಾರ್, 8ನೇ ಸ್ಥಾನದಲ್ಲಿ ಮಹೇಶ್ ಬಾಬು, 9ನೇ ಸ್ಥಾನದಲ್ಲಿ ಸೂರ್ಯ, 10ನೇ ಸ್ಥಾನದಲ್ಲಿ ಅಜಿತ್ ಕುಮಾರ್ ಇದ್ದಾರೆ.