ಕನ್ನಡ ಚಿತ್ರರಂಗದ ಕನಸುಗಾರ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರ ಪುತ್ರ ವಿಕ್ರಮ್ ಅಭಿನಯಿಸಿರುವ ಚೊಚ್ಚಲ ಸಿನಿಮಾ ತ್ರಿವಿಕ್ರಮ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್ ಹಾಗು ಹಾಡುಗಳಿಂದ ಸುದ್ದಿಯಾಗಿರೋ ಸಿನಿಮಾದ ಬಿಡುಗಡೆಗೂ ಮುನ್ನ ಚಿತ್ರತಂಡ ಉತ್ತರ ಕರ್ನಾಟಕ ಪ್ರೇಕ್ಷಕರನ್ನು ಭೇಟಿಯಾಗಲು ಯೋಜನೆ ರೂಪಿಸಿದೆ.
ಜೂನ್ 13 ರಂದು ದಾವಣಗೆರೆಯಿಂದ ಪ್ರಯಾಣ ಆರಂಭಿಸಲಿದ್ದು, 14ರಂದು ಹುಬ್ಬಳ್ಳಿ-ಧಾರವಾಡ, 15 ರಂದು ಬೆಳಗಾವಿ ಹಾಗೂ 16ರಂದು ಬಳ್ಳಾರಿ ಮತ್ತು ಹೊಸಪೇಟೆಯ ಪ್ರಮುಖ ಸ್ಥಳಗಳು ಮತ್ತು ಕಾಲೇಜುಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮಂಡ್ಯ, ಮದ್ದೂರು ಹಾಗೂ ಮೈಸೂರು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಯನ್ನು ಚಿತ್ರತಂಡ ರೂಪಿಸಿದೆ.
ಜೂನ್ 19ರಂದು ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್ ಈವೆಂಟ್ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ನಾನಾ ಭಾಷೆಯ ತಾರೆಯರು ಆಗಮಿಸುವ ನಿರೀಕ್ಷೆಯಿದೆ. ಅದೇ ವೇದಿಕೆಯಲ್ಲಿ ಟ್ರೇಲರ್ ಬಿಡುಗಡೆಯಾಗಲಿದೆ.