ಡಿಸೆಂಬರ್ 30ರಂದು ಕಾರು ಅಪಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿರುವ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉತ್ತರಾಖಂಡದ ಡೆಹ್ರಾಡೂನ್ನಿಂದ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ 4 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಇದೀಗ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ರಿಷಭ್ ಪಂತ್ ಅವರು ಕಾರು ಅಪಘಾತಕ್ಕೀಡಾದ ನಂತರ ಮಾಡೆಲ್, ನಟಿ ಊರ್ವಶಿ ರೌಟೇಲಾ ಸಾಮಾಜಿಕ ಮಾಧ್ಯಮದಲ್ಲಿ ರಹಸ್ಯ ಪೋಸ್ಟ್ಗಳನ್ನು ಹಂಚಿಕೊಳ್ಳುವುದನ್ನು ಮುಂದುವರೆಸಿದ್ದಾರೆ. ಅಪಘಾತದ ಸುದ್ದಿ ಹೊರ ಬರುತ್ತಿದ್ದಂತೆ "ಪ್ರೇಯಿಂಗ್" ಎಂದು ತಮ್ಮ ಫೋಟೋವೊಂದನ್ನು ಹಂಚಿಕೊಂಡಿದ್ದರು. ಪ್ರಾರ್ಥನೆ ಎಂಬ ಒಂದು ಪದದ ಸಂದೇಶವನ್ನು ಹಂಚಿಕೊಳ್ಳುವುದರಿಂದ ಹಿಡಿದು ಕ್ರಿಕೆಟಿಗ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಚಿತ್ರವನ್ನು ಹಂಚಿಕೊಳ್ಳುವವರೆಗೆ, ಊರ್ವಶಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೂ ರಿಷಭ್ಗೂ ಏನಾದರೂ ಸಂಬಂಧವಿದೆಯೇ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಆದರೆ ಯಾವುದಕ್ಕೂ ಸ್ಪಷ್ಟತೆ ಸಿಕ್ಕಿಲ್ಲ.
ಊರ್ವಶಿ ರೌಟೇಲಾ ಪೋಸ್ಟ್:ಗುರುವಾರದಂದು ಊರ್ವಶಿ ರೌಟೇಲಾ ಅವರು ಕ್ರಿಕೆಟಿಗನನ್ನು ದಾಖಲಿಸಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಹಂಚಿಕೊಂಡಿದ್ದಾರೆ. ತಾವು ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ಭೇಟಿ ಮಾಡಿದ್ದಾರೆಯೇ ಎಂಬುದನ್ನು ಊರ್ವಶಿ ಸ್ಪಷ್ಟಪಡಿಸಿಲ್ಲ. ಆದರೆ, ಅವರು ಪೋಸ್ಟ್ ಅನ್ನು ಹಂಚಿಕೊಂಡ ಕೂಡಲೇ ಅದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪಂತ್ ಅವರನ್ನು ಆಸ್ಪತ್ರೆಯಲ್ಲಿ ನಟಿ ಭೇಟಿಯಾಗಿರಬಹುದು ಎಂದು ಅಭಿಮಾನಿಗಳು ಊಹಿಸಲು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ:ಡೆಹ್ರಾಡೂನ್ನಿಂದ ಮುಂಬೈಗೆ ರಿಷಭ್ ಏರ್ಲಿಫ್ಟ್: ಅಂಬಾನಿ ಆಸ್ಪತ್ರೆಗೆ ಪಂತ್ ದಾಖಲು