ಕರ್ನಾಟಕ

karnataka

ETV Bharat / entertainment

Vasishta Simha: 'ಲವ್​ ಲಿ' ಟೈಟಲ್​ ಸಾಂಗ್​ ರಿಲೀಸ್​​.. ವಸಿಷ್ಠ ಸಿಂಹಗೆ ರವಿಚಂದ್ರನ್​, ಉಪೇಂದ್ರ ಸಾಥ್​ - etv bharat kannada

ವಸಿಷ್ಠ ಸಿಂಹ ನಾಯಕನಾಗಿ ನಟಿಸಿರುವ 'ಲವ್ ​ಲಿ' ಚಿತ್ರದ ಟೈಟಲ್​ ಹಾಡನ್ನು ಸ್ಯಾಂಡಲ್​ವುಡ್​ನ ಸ್ಟಾರ್​ ನಟರು ಬಿಡುಗಡೆಗೊಳಿಸಿದ್ದಾರೆ.

Love lee
ಲವ್​ ಲಿ

By

Published : Jun 12, 2023, 5:03 PM IST

ನಟ ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸಿರುವ 'ಲವ್ ಲಿ' ಚಿತ್ರದ ಟೈಟಲ್ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ಚೇತನ್ ಕೇಶವ್ ನಿರ್ದೇಶನದ ಈ ಸಿನಿಮಾದ ಹಾಡನ್ನು ಕ್ರೇಜಿ ಸ್ಟಾರ್​ ರವಿಚಂದ್ರನ್​, ರಿಯಲ್ ಸ್ಟಾರ್ ಉಪೇಂದ್ರ, 'ನೆನಪಿರಲಿ' ಪ್ರೇಮ್, ಪ್ರಿಯಾಂಕಾ ಉಪೇಂದ್ರ ಹಾಗೂ ಹರಿಪ್ರಿಯಾ ಜೊತೆಯಾಗಿ ಅನಾವರಣಗೊಳಿಸಿದ್ದಾರೆ.

ಬಳಿಕ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಚೇತನ್ ಕೇಶವ್​, "ನಿರ್ಮಾಪಕರ ಸಹಕಾರದಿಂದ ಸಿನಿಮಾ ಇಷ್ಟು ಚೆನ್ನಾಗಿ ಬಂದಿದೆ. ಸಾಂಗ್​ನಂತೆ ಸಿನಿಮಾ ಕೂಡ ಕಲರ್ ಫುಲ್ ಆಗಿದೆ. ಪ್ರೀತಿ ಅಂದ್ರೆ ಎನೆಲ್ಲಾ ಇರುತ್ತೆ ಎಂಬುದನ್ನು ಸಿನಿಮಾದಲ್ಲಿ ತೋರಿಸಿದ್ದೇವೆ. ಮೊದಲ ಭಾಗದಲ್ಲಿ ರೋಮ್ಯಾಂಟಿಕ್ ಕಥೆ ಇದ್ದರೆ, ದ್ವಿತೀಯಾರ್ಧದಲ್ಲಿ ಕಂಟೆಂಟ್ ಬಗ್ಗೆ ಹೇಳಲಾಗಿದೆ. ನಾನು 9 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶಕ ನರ್ತನ್ ಜೊತೆ 'ಮಫ್ತಿ' ಚಿತ್ರಕ್ಕೆ ಕೆಲಸ ಮಾಡಿದ್ದೇನೆ. ಸ್ಕೂಲ್ ದಿನಗಳಿಂದ ನನಗೆ ಸಿನಿಮಾ ಮಾಡುವ ಆಸೆ. ಉಪೇಂದ್ರ, ರವಿಚಂದ್ರನ್ ಅವರು ನನಗೆ ಸ್ಪೂರ್ತಿ. ಆದರೆ ನಾನು ಹೆಚ್ಚಾಗಿ ಆ್ಯಕ್ಷನ್ ಸಿನಿಮಾಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಚಿತ್ರದಲ್ಲಿ ಮಾಸ್, ಕ್ಲಾಸ್ ಎರಡನ್ನು ಬಳಸಿದ್ದೇನೆ" ಎಂದು ಮಾಹಿತಿ ನೀಡಿದರು.

ಮುಂದುವರೆದು, "ಚಿತ್ರದಲ್ಲಿ ಸೋಷಿಯಲ್ ಮೆಸೇಜ್ ಕೂಡ ಇದೆ. ಮಂಗಳೂರು, ಬೆಂಗಳೂರು ಉಡುಪಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನು ಲಂಡನ್​ನಲ್ಲಿ ಒಂದು ಸಾಂಗ್ ಶೂಟಿಂಗ್ ಮಾಡಲು ಯೋಜನೆ ಹಾಕಲಾಗಿದೆ. ರೌಡಿಸಂ, ಲವ್, ಡ್ರಾಮಾ ಹಾಗೂ ಫ್ಯಾಮಿಲಿ ಜಾನರ್​ನಲ್ಲಿ ಸಿನಿಮಾ ಸಾಗುತ್ತದೆ. ಪ್ರೀತಿ, ನಂಬಿಕೆ ಮೇಲೆ ಸಂಬಂಧಗಳು ಮುಖ್ಯ. ಅವುಗಳನ್ನು ಹೇಗೆ ಉಳಿಸುಕೊಳ್ಳಬೇಕು? ಎಂಬುದು ಕಥೆಯಲ್ಲಿ ಇದೆ. ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಮೂರು ಆ್ಯಕ್ಷನ್ ಮತ್ತು ನಾಲ್ಕು ಹಾಡುಗಳಿವೆ" ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಾಯಕ ವಸಿಷ್ಠ ಸಿಂಹ ಮಾತನಾಡಿ, "ನನ್ನನ್ನು ತುಂಬಾ ಕಾಡಿದಂತಹ ಸಿನಿಮಾ ಇದು. ಈಗ ಈ ಹಾಡಿನಿಂದ ಪ್ರಮೋಷನ್ ಶುರು ಮಾಡಿದ್ದು, ಆಗಸ್ಟ್​ನಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಇದು ಸುಂದರ ಪ್ರೇಮಕಥೆಯ ಚಿತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ನಿರ್ಮಾಪಕರು ಸೇರಿದಂತೆ ಚಿತ್ರತಂಡದ ಸಹಕಾರಕ್ಕೆ ಧನ್ಯವಾದ" ಎಂದರು.

ನಂತರ ನಾಯಕಿ ಸ್ಟೇಪಿ ಪಟೇಲ್​ ಮಾತನಾಡಿ "ನಾನು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದು ಬಿಟ್ಟರೇ ಇದೇ ಮೊದಲ ಕನ್ನಡ ಸಿನಿಮಾ. ಒಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ನಾನು ಇನ್ನಷ್ಟು ಸಿನಿಮಾ ಮಾಡಲು ನಿಮ್ಮ ಆಶಿರ್ವಾದ ಬೇಕು. ನಾನು ಈ ಚಿತ್ರದಲ್ಲಿ ಜನನಿ ಎಂಬ ಪಾತ್ರ ನಿರ್ವಹಿಸಿದ್ದೇನೆ" ಎಂದು ನುಡಿದರು.

ಹಾಡು ಬಿಡುಗಡೆಗೊಳಿಸಿದ ಮಾತನಾಡಿದ ಉಪೇಂದ್ರ, "ಹಾಡು ಇಂಪಾಗಿದ್ದು, ಇಂಟ್ರೆಸ್ಟ್ ಆಗಿ ಕೂಡ ಇದೆ. ಸಾಂಗ್ ನೋಡುತ್ತಿದ್ದರೆ ನಂಗೆ ಸಿನಿಮಾ ನೋಡಬೇಕು ಅನಿಸುತ್ತಿದೆ" ಎಂದರು. ಬಳಿಕ ರವಿಚಂದ್ರನ್​ ಅಭುವನಾಸ್ ಯೂಟ್ಯೂಬ್ ಚಾನೆಲ್​ಗೆ ಚಾಲನೆ ನೀಡಿ, "ಚಿತ್ರ 'ಲವ್ ಲಿ' ಆಗಿರುತ್ತದೆ. ಹೊಸಬರಲ್ಲಿ ಉತ್ಸಾಹವಿದ್ದು, ಹಾಡು ಚೆನ್ನಾಗಿ ಬಂದಿದೆ. ತಂಡಕ್ಕೆ ಒಳ್ಳೆಯದಾಗಲಿ" ಎಂದರು.

ಇನ್ನು ನಿರ್ಮಾಪಕರಾದ ಬಾಲಕೃಷ್ಣ ಜಿ.ಎನ್, ಕೃಷ್ಣ, ಬೇಬಿ ವಂಶಿಕಾ ತಮ್ಮ ಅನುಭವ ಹಂಚಿಕೊಂಡರು. ಈ ವೇಳೆ ನೆನಪಿರಲಿ ಪ್ರೇಮ್​, ಪ್ರಿಯಾಂಕಾ ಉಪೇಂದ್ರ ಮತ್ತು ಹರಿಪ್ರಿಯಾ ಉಪಸ್ಥಿತರಿದ್ದರು. 'ಲವ್ ಲಿ' ಸಿನಿಮಾವನ್ನು ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿದ್ದಾರೆ.

ಇದನ್ನೂ ಓದಿ:Bhimaa movie: ಟಾಲಿವುಡ್​ ನಿರ್ದೇಶಕನಾಗಿ 'ಭಜರಂಗಿ' ಹರ್ಷ ಎಂಟ್ರಿ.. 'ಭೀಮ'ನಾಗಿ ಗೋಪಿಚಂದ್ ಫಿಕ್ಸ್​!​

ABOUT THE AUTHOR

...view details