ಕರ್ನಾಟಕ

karnataka

ETV Bharat / entertainment

ಶಿವಣ್ಣನ 125ನೇ ಸಿನಿಮಾ 'ವೇದ' ಬಿಡುಗಡೆ‌ಗೆ ಮುಹೂರ್ತ ಫಿಕ್ಸ್ - shiva rajkumar Veda movie

ಹರ್ಷ ಆ್ಯಕ್ಷನ್ ಕಟ್ ಹೇಳಿರುವ ನಟ ಶಿವ ರಾಜ್​​ಕುಮಾರ್ ಅಭಿನಯದ 125ನೇ ಚಿತ್ರ ವೇದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

Veda movie release date announced
ಡಿಸೆಂಬರ್ 23ಕ್ಕೆ 'ವೇದ' ಬಿಡುಗಡೆ‌

By

Published : Oct 20, 2022, 12:47 PM IST

'ವೇದ'...ಹ್ಯಾಟ್ರಿಕ್ ಹೀರೋ ಶಿವ ರಾಜ್​​ಕುಮಾರ್ ಅಭಿನಯದ 125ನೇ ಚಿತ್ರ. ಪೋಸ್ಟರ್​ನಿಂದಲೇ ಕನ್ನಡ ಚಿತ್ರರಂಗದಲ್ಲಿ ಕುತೂಹಲ ಹುಟ್ಟಿಸಿರೋ ಚಿತ್ರತಂಡ ಈಗ ಹೊಸ ಪೋಸ್ಟರ್ ಜೊತೆಗೆ ಈ ಸಿನಿಮಾ ಬಿಡುಗಡೆ ಡೇಟ್ ಅನ್ನು ಅನೌನ್ಸ್​ ಮಾಡಿದೆ.

ಹರ್ಷ ಆ್ಯಕ್ಷನ್ ಕಟ್ ಹೇಳಿರುವ ವೇದ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಅಂದರೆ ಡಿಸೆಂಬರ್ 23ಕ್ಕೆ ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 'ವೇದ' ಶಿವರಾಜ್ ಕುಮಾರ್-ಹರ್ಷ ಜೋಡಿಯ 4ನೇ ಚಿತ್ರವಾಗಿದ್ದು, ಶಿವ ರಾಜ್​ಕುಮಾರ್ ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಡಿಸೆಂಬರ್ 23ಕ್ಕೆ 'ವೇದ' ಬಿಡುಗಡೆ‌

ವೇದ ಸಿನಿಮಾ 1960ರ ದಶಕದಲ್ಲಿ ನಡೆದ ಕಥೆ. ಶಿವರಾಜ್ ಕುಮಾರ್ ಜೊತೆಗೆ ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಅರುಣ್ ಸಾಗರ್ ಮಗಳು ಅದಿತಿ ಸಾಗರ್ ಹಾಗೂ ಅನುಪಮಾ ಪೋಸ್ಟರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮಾಶ್ರಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೋಷನ್ ಪೋಸ್ಟರ್ ಅನ್ನು ಕಿಚ್ಚಿನ ನಡುವೆ ರೂಪಿಸಲಾಗಿದೆ. ಇನ್ನೂ ಚಿತ್ರಕಥೆ ಹೇಗೆ ಸಾಗಲಿದೆ ಎಂಬುದರ ಬಗ್ಗೆ ನಿರ್ದೇಶಕರು ಯಾವುದೇ ಸುಳಿವು ಕೊಟ್ಟಿಲ್ಲ.

ಇದನ್ನೂ ಓದಿ:ಸೆಪ್ಟೆಂಬರ್ 13 ಚಿತ್ರಕ್ಕೆ ಆರು ತಿಂಗಳ ತೆರಿಗೆ ವಿನಾಯಿತಿ ನೀಡಿದ ಸರ್ಕಾರ..

ವೇದ ಚಿತ್ರವನ್ನು ಝೀ ಸ್ಟುಡಿಯೋಸ್​ ಜೊತೆಗೂಡಿ ಗೀತಾ ಸ್ಟುಡಿಯೋಸ್ ಮೂಲಕ ಗೀತಾ ಶಿವ ರಾಜ್​ಕುಮಾರ್ ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಗೀತಾ ಶಿವರಾಜ್​ಕುಮಾರ್ ನಿರ್ಮಾಪಕಿಯಾಗಲಿದ್ದಾರೆ. ಸದ್ಯ ವೇದ ಪೋಸ್ಟರ್​ನಲ್ಲಿ ಡೋಂಟ್ ಫಿಯರ್, ಡೋಂಟ್ ಫರ್ಗಿವ್ ಎಂಬ ಟ್ಯಾಗ್ ಲೈನ್ ಇದೆ. ಜೊತೆಗೆ ರಿವೀಲ್ ಆಗಿರುವ ಪೋಸ್ಟರ್ ಶಿವರಾಜ್ ಕುಮಾರ್ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿಸಿದೆ.

ABOUT THE AUTHOR

...view details