ಭಾರತೀಯ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರು ಮೆದುಳಿನ ರಕ್ತಸ್ರಾವದಿಂದ (ಬ್ರೈನ್ ಹ್ಯಾಮರೇಜ್) ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಹೇಮಾ ಚೌಧರಿ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಪುತ್ರ ಐರ್ಲ್ಯಾಂಡ್‌ನಲ್ಲಿದ್ದಾರೆ. ಕುಟುಂಬಸ್ಥರು ಮಗನ ಬರುವಿಕೆಗಾಗಿ ಕಾಯುತ್ತಿದ್ದಾರೆ.
ಹೇಮಾ ಚೌಧರಿ ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ಕಲಾವಿದೆ. ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಭಾಷೆಗಳು ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಕೂಚಿಪುಡಿ ಕಲಾವಿದೆಯೂ ಹೌದು.