ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಹೊಂಬಾಳೆ ಫಿಲಂಸ್ ಅಡಿ 12ನೇ ಪ್ಯಾನ್ ಇಂಡಿಯಾ ಚಿತ್ರ ರೆಡಿಯಾಗುತ್ತಿದೆ. ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು ಅವರು ಮಲೆಯಾಳಂ ನಟ ಫಹಾದ್ ಫಾಸಿಲ್ ಜೊತೆ ಧೂಮಂ ಸಿನಿಮಾ ಮಾಡುತ್ತಿರುವುದು ಗೊತ್ತಿರುವ ವಿಚಾರ.
ಸದ್ಯ ಧೂಮಂ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಹಿನ್ನೆಲೆ ನಿರ್ಮಾಪಕ ವಿಜಯ್ ಕುಮಾರ್ ಕಿರಗಂದೂರು, ಕಾಂತಾರ ಸಾರಥಿ ರಿಷಭ್ ಶೆಟ್ಟಿ, ನಟಿ ಸಪ್ತಮಿ ಗೌಡ ಸೇರಿದಂತೆ ಮೊದಲಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್ ಫಾಸಿಲ್, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು, ಅವರೊಂದಿಗೆ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ.