ಕರ್ನಾಟಕ

karnataka

ETV Bharat / entertainment

ನಾಳೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಕನ್ನಡದ ಮೊದಲ ಬಯೋಪಿಕ್ 'ವಿಜಯಾನಂದ' - vijayananda latest news

ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ ತಯಾರಾಗಿರುವ 'ವಿಜಯಾನಂದ' ಚಿತ್ರವು ನಾಳೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 1,200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

vijayananda biopic will released on tomorrow
ಬಿಡುಗಡೆಗೆ ಸಜ್ಜಾದ ವಿಜಯಾನಂದ

By

Published : Dec 8, 2022, 11:10 AM IST

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರ ಜೀವನವನ್ನು ಆಧರಿಸಿ ತಯಾರಾಗಿರುವ 'ವಿಜಯಾನಂದ' ಚಿತ್ರವು ಡಿಸೆಂಬರ್ 9ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣುತ್ತಿದೆ.

ಟ್ರೈಲರ್​ನಿಂದಲೇ ಕ್ರೇಜ್ ಹುಟ್ಟಿಸಿರೋ ವಿಜಯಾನಂದ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ 1,200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 1976ರಲ್ಲಿ ಒಂದು ಟ್ರಕ್​ನಿಂದ ಪ್ರಾರಂಭವಾಗಿ ಇಂದು ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್​ಎಲ್ ಸಂಸ್ಥೆಯ ಮಾಲೀಕರಾಗಿರುವ ವಿಜಯ ಸಂಕೇಶ್ವರ ಅವರ ಸಾಹಸಮಯ ಮತ್ತು ರೋಮಾಂಚನಕಾರಿ ಕಥೆಯನ್ನು ಸಾರುವ ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಮತ್ತು ಅವರ ಮಗ ಡಾ. ಆನಂದ ಸಂಕೇಶ್ವರ ಅವರು ನಡೆದು ಬಂದ ಹಾದಿಯ ಕಥೆ ಇದೆ.

ಬಿಡುಗಡೆಗೆ ಸಜ್ಜಾದ ವಿಜಯಾನಂದ

ಈ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಜಯ ಸಂಕೇಶ್ವರ ಅವರ ಜೀವನವನ್ನು ಇಂಡಿಯನ್ ಇನ್ಸ್​​ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್​ನಲ್ಲಿ ಪಠ್ಯವನ್ನಾಗಿ ಅಳವಡಿಸಬೇಕು ಎಂದು ಹೇಳಿದ್ದರು. ಅವರೊಬ್ಬ ನಿಜವಾದ ಕಾಯಕಪುರುಷ ಎಂದು ಡಾ. ವಿಜಯ ಸಂಕೇಶ್ವರ ಅವರನ್ನು ಬಣ್ಣಿಸಿದ್ದರು. ಅಂತಹ ಕಾಯಕಪುರುಷನ ಜೀವನ ತೆರೆಯ ಮೇಲೆ ಬರುವುದಕ್ಕೆ ತಯಾರಾಗಿದ್ದು, ಪ್ರೇಕ್ಷಕರು ಜಗತ್ತಿನಾದ್ಯಂತ ಚಿತ್ರವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಈಗಾಗಲೇ ಈ ಚಿತ್ರದ ಹಾಡುಗಳು ಕೂಡ ಬಿಡುಗಡೆಯಾಗಿದ್ದು, ಎಲ್ಲ ಭಾಷೆಗಳ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ರಿಷಿಕಾ ಶರ್ಮ ನಿರ್ದೇಶನದ ವಿಜಯಾನಂದ ನಾಳೆ ಬಿಡುಗಡೆ

ಇದನ್ನೂ ಓದಿ:ಚುನಾವಣಾ ಸಮರಕ್ಕೆ 'ವಾರಾಹಿ' ಸಿದ್ಧ.. ಪ್ರಚಾರದ ರಥವೇರಿದ ಪವನ್​ ಕಲ್ಯಾಣ್

ಈ ಹಿಂದೆ 'ಟ್ರಂಕ್' ಎಂಬ ಚಿತ್ರವನ್ನು ನಿರ್ದೇಶಿಸಿದ್ದ ರಿಷಿಕಾ ಶರ್ಮ, 'ವಿಜಯಾನಂದ' ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್​​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನಂತ್ ನಾಗ್, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್, ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್, ರಮೇಶ್ ಭಟ್ ಸೇರಿ ಮೊದಲಾದ ಪ್ರತಿಭಾವಂತ ಕಲಾವಿದರು ವಿಜಯಾನಂದ ಚಿತ್ರದ ಭಾಗವಾಗಿದ್ದಾರೆ.

ಇದನ್ನೂ ಓದಿ:'ವಿಜಯ ಸಂಕೇಶ್ವರ ಜೀವನಾಧಾರಿತ ಸಿನಿಮಾ ಮೆಗಾಹಿಟ್ ಆಗಲಿದೆ': ಟ್ರೈಲರ್‌ ಬಿಡುಗಡೆಗೊಳಿಸಿದ ಸಿಎಂ

ವಿ ಆರ್ ಎಲ್ ಪ್ರೊಡಕ್ಷನ್ಸ್​​ನಡಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ 'ವಿಜಯಾನಂದ' ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ. ಕನ್ನಡದ ಮೊದಲ ಬಯೋಪಿಕ್ ಸಿನಿಮಾವಾಗಿರೋ ವಿಜಯಾನಂದಕ್ಕೆ ಪ್ರೇಕ್ಷಕರು ಎಷ್ಟು ಮಾರ್ಕ್ಸ್ ಕೊಡ್ತಾರೆ ಅನ್ನೋದು ನಾಳೆ ಗೊತ್ತಾಗಲಿದೆ.

ABOUT THE AUTHOR

...view details