'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಮೂಲಕ ಸಂಚಲನ ಮೂಡಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಕೆಲವು ವಿವಾದಗಳಿಂದ ಅವರು ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗಷ್ಟೇ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ವಿರುದ್ಧ ಅಗ್ನಿಹೋತ್ರಿ ಮಾತನಾಡಿರುವುದಾಗಿ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಇದೀಗ ಸ್ವತಃ ಅಗ್ನಿಹೋತ್ರಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಟ್ವೀಟ್ ಮಾಡುವ ಮೂಲಕ ಎಲ್ಲ ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಅಗ್ನಿಹೋತ್ರಿ ಟ್ವೀಟ್:"ನಾನು ಮತ್ತೊಮ್ಮೆ ಪ್ರಭಾಸ್ ಚಿತ್ರಕ್ಕೆ ಪೈಪೋಟಿ ನೀಡುತ್ತಿದ್ದೇನೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿರುವವರು ಯಾರು? ಪ್ರಭಾಸ್ ಬಗ್ಗೆ ನನಗೆ ಅಪಾರ ಗೌರವವಿದೆ. ಅವರೊಬ್ಬ ಮೆಗಾ ಸ್ಟಾರ್. ಅವರು ಭಾರಿ ಬಜೆಟ್ ಚಿತ್ರಗಳನ್ನು ಮಾಡುತ್ತಾರೆ. ಆದರೆ, ನಾವು ಸ್ಟಾರ್ ನಟರಿಲ್ಲದೇ ಕಡಿಮೆ ಬಜೆಟ್ನಲ್ಲಿ ಜನ ಸಾಮಾನ್ಯರಿಗಾಗಿ ಸಿನಿಮಾ ಮಾಡುತ್ತೇವೆ. ನಮ್ಮ ನಡುವೆ ಯಾವುದೇ ಹೋಲಿಕೆ ಇಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ" ಎಂದು ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ. ಇದೀಗ ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ:'ಮೈ ನೇಮ್ ಈಸ್ ಲಖನ್' ಸಾಂಗ್ ಆನಂದಿಸಿದ ವಿದೇಶಿಗ - ಮೆಚ್ಚಿನ ನಟ ಅನಿಲ್ ಕಪೂರ್ ಎದುರಿದ್ದರೂ ಗುರುತಿಸದ ಅಭಿಮಾನಿ