ಕರ್ನಾಟಕ

karnataka

ETV Bharat / entertainment

Vivek Agnihotri: ಪ್ರಭಾಸ್​ 'ಸಲಾರ್​' ಜೊತೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್​ ವಾರ್​' ಫೈಟ್?​ - ಪ್ರಶಾಂತ್​ ನೀಲ್​ ಮತ್ತು ವಿವೇಕ್​ ಅಗ್ನಿಹೋತ್ರಿ ಸಿನಿಮಾ

Salaar vs The Vaccine War: ಪ್ರಭಾಸ್​ ನಟನೆಯ 'ಸಲಾರ್​' ಮತ್ತು ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್​ ವಾರ್' ಒಂದೇ ದಿನ ಬಿಡುಗಡೆಯಾಗಲಿದೆ. ಯಾವಾಗ ಗೊತ್ತೇ?

Salaar Vs The Vaccine War
ಪ್ರಭಾಸ್​ 'ಸಲಾರ್​' ಜೊತೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್​ ವಾರ್​' ಫೈಟ್?​

By

Published : Aug 15, 2023, 5:48 PM IST

ಇಡೀ ಭಾರತೀಯ ಚಿತ್ರರಂಗ ಕಾತುರದಿಂದ ಎದುರು ನೋಡುತ್ತಿರುವ ಬಹುನಿರೀಕ್ಷಿತ ಚಿತ್ರವೇ 'ಸಲಾರ್​'. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾವನ್ನು 'ಕೆಜಿಎಫ್​' ಖ್ಯಾತಿಯ ಪ್ರಶಾಂತ್​ ನೀಲ್​​ ನಿರ್ದೇಶಿಸುತ್ತಿದ್ದಾರೆ. ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರದ ಮೇಲೆ ಮುಗಿಲೆತ್ತರದ ನಿರೀಕ್ಷೆಯಿದೆ. ಇದೀಗ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ ಪೈಪೋಟಿ ನೀಡಲು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ 'ದಿ ವ್ಯಾಕ್ಸಿನ್​ ವಾರ್' ಸಜ್ಜಾಗಿದೆ.

ರಿಲೀಸ್​ ಯಾವಾಗ?: 'ಕೆಜಿಎಫ್' ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್, ಈ ಬಾರಿ 'ಸಲಾರ್' ಮೂಲಕ ಮತ್ತೊಂದು ಹೊಸ ಪ್ರಪಂಚವನ್ನೇ ಸೃಷ್ಟಿಸಲಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಈವರೆಗೂ ಕಂಡುಕೇಳರಿಯದಷ್ಟರ ಮಟ್ಟಿಗೆ ಚಿತ್ರ ನಿರ್ಮಾಣವಾಗಿದೆ. ಸೆಪ್ಟಂಬರ್​ 28ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಗ್ಲಿಂಪ್ಸ್​ ಮತ್ತು ಪೋಸ್ಟರ್​ಗಳು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಆದರೆ, ಕೆಲವು ದಿನಗಳಿಂದ ಈ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ ಪೈಪೋಟಿ ನೀಡಲು ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್​ ವಾರ್' ತಯಾರಾಗಿದೆ ಎಂಬ ಮಾತು ಕೇಳಿ ಬರುತ್ತಿತ್ತು. ಇದೀಗ ಈ ವಿಚಾರ ನಿಜವಾಗಿದೆ. ಹೌದು, ಈ ಸಿನಿಮಾ ತಂಡ ಕೂಡ ಚಿತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಸೆಪ್ಟಂಬರ್​ 28ರಂದೇ 'ದಿ ವ್ಯಾಕ್ಸಿನ್​ ವಾರ್' ಚಿತ್ರ ಕೂಡ ತೆರೆ ಕಾಣಲಿದೆ. ಈ ಮೂಲಕ ಪ್ರಶಾಂತ್​ ನೀಲ್​ ಮತ್ತು ವಿವೇಕ್​ ಅಗ್ನಿಹೋತ್ರಿ ಸಿನಿಮಾಗಳು ಥಿಯೇಟರ್​ಗಳಲ್ಲಿ ಘರ್ಷಿಸಲಿದೆ.

'ಸಲಾರ್'​ ಚಿತ್ರತಂಡ ಹೀಗಿದೆ...: ದೊಡ್ಡ ತಾರಾಗಣವಿರುವ ಚಿತ್ರದಲ್ಲಿ ಪ್ರಭಾಸ್​ಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕೆಜಿಎಫ್ ಚಿತ್ರಗಳಿಗೆ ಕೆಲಸ ಮಾಡಿದ ತಾಂತ್ರಿಕ ತಂಡವೇ ಈ ಚಿತ್ರಕ್ಕೂ ಕೆಲಸ ಮಾಡಿದ್ದು, ರವಿ ಬಸ್ರೂರು ಅವರ ಸಂಗೀತ, ಭುವನ್ ಗೌಡ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ಸೆ. 28ರಂದು ಪಂಚ ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಅದ್ಧೂರಿಯಾಗಿ ಸಿನಿಮಾ ಬಿಡುಗಡೆಯಾಗಲಿದೆ.

'ದಿ ವ್ಯಾಕ್ಸಿನ್​ ವಾರ್​' ಎಂದರೆ?:'ದಿ ವ್ಯಾಕ್ಸಿನ್​ ವಾರ್' ಸಿನಿಮಾದ ಮೇಲೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೋವಿಡ್​ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ಚಿತ್ರ ತಯಾರಾಗುತ್ತಿದೆ. ಜೊತೆಗೆ, ಭಾರತೀಯ ವಿಜ್ಞಾನಿಗಳ ಕಥೆಯಾಧರಿತವಾಗಿದೆ. ಈ ಚಿತ್ರದಲ್ಲಿ, ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್, ರೈಮಾ ಸೇನ್, ಸಪ್ತಮಿ ಗೌಡ, ನಾನಾ ಪಾಟೇಕರ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಾಶ್ಮೀರಿ ಫೈಲ್ಸ್​ ನಿರ್ಮಾಪಕ ಅಭಿಷೇಕ್​ ಅಗರ್ವಾಲ್​ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರಭಾಸ್​ ಸಿನಿಮಾಗೆ ಭಾರೀ ಪೈಪೋಟಿ ನೀಡಲಿದೆ.

ಇದನ್ನೂ ಓದಿ:'ಪ್ರಭಾಸ್​ ಬಗ್ಗೆ ನನಗೆ ಅಪಾರ ಗೌರವವಿದೆ'.. ವದಂತಿಗಳಿಗೆ ತೆರೆ ಎಳೆದ ವಿವೇಕ್ ಅಗ್ನಿಹೋತ್ರಿ

ABOUT THE AUTHOR

...view details