ಚೆನ್ನೈ (ತಮಿಳುನಾಡು):ಬಹುಭಾಷಾ ನಟಿ ನಯನತಾರ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರು ಅವಳಿ ಮಕ್ಕಳ ತಂದೆ ಮತ್ತು ತಾಯಿ ಆಗಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂ ಹಾಗೂ ಟ್ವಿಟರ್ ಖಾತೆಯಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಮಾಹಿತಿ ಹಂಚಿಕೊಂಡಿದ್ದಾರೆ.
ನಯನ್ ಹಾಗೂ ನಾನು ಅಮ್ಮ ಹಾಗೂ ಅಪ್ಪ ಆಗಿದ್ದೇವೆ. ನಾನು ಅವಳಿ ಗಂಡು ಮಕ್ಕಳು ಆಗಿವೆ. ನಮ್ಮ ಎಲ್ಲ ಪ್ರಾರ್ಥನೆ, ನಮ್ಮ ಪೂರ್ವಜರ ಆಶೀರ್ವಾದವು ಇಬ್ಬರು ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್ ಮತ್ತು ಉಲಗಂಗೆ ನಿಮ್ಮೆಲ್ಲರ ಆಶೀರ್ವಾದ ಬೇಕೆಂದು ವಿಘ್ನೇಶ್ ಶಿವನ್ ಬರೆದುಕೊಂಡಿದ್ದಾರೆ.
ಏಳು ವರ್ಷಗಳಿಂದ ಪ್ರೀತಿಯಲ್ಲಿದ್ದ ಬಹುಭಾಷಾ ನಟಿ ನಯನತಾರ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇದೇ ವರ್ಷದ ಜೂನ್ 9ರಂದು ದಾಂಪತ್ಯಕ್ಕೆ ಕಾಲಿಟ್ಟಿದ್ದರು. ತಮಿಳುನಾಡಿನ ಮಹಾಬಲಿಪುಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಜೋಡಿ ಸಪ್ತಪದಿ ತುಳಿದಿದ್ದರು. ಸೂಪರ್ ಸ್ಟಾರ್ ರಜನಿಕಾಂತ್, ಹೆಸರಾಂತ ನಿರ್ದೇಶಕ ಮಣಿರತ್ನಂ, ಖ್ಯಾತ ನಟರಾದ ಶಾರುಖ್ ಖಾನ್, ವಿಜಯ್ ಸೇತುಪತಿ, ಸೂರ್ಯ, ಕಾರ್ತಿ, ಶರತ್ ಕುಮಾರ್ ಪಾಲ್ಗೊಂಡಿದ್ದರು. ಮದುವೆ ನಂತರ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿದ್ದವು.
ಇದೀಗ ನಯನತಾರ ಮತ್ತು ವಿಘ್ನೇಶ್ ಶಿವನ್ ಅವಳಿ ಮಕ್ಕಳ ಪಾದಗಳನ್ನು ಚುಂಬಿಸುವ ಮುದ್ದಾಗ ಫೋಟೋಗಳನ್ನು ಇನ್ಸ್ಟಾಗ್ರಾಂ ಹಾಗೂ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಏಳು ವರ್ಷಗಳಿಂದ ಪ್ರೀತಿಯಲ್ಲಿದ್ದ ತಾರಾ ಜೋಡಿಯ ಅದ್ಧೂರಿ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು