ಹುಬ್ಬಳ್ಳಿ:ರಂಗಿತರಂಗ ಖ್ಯಾತಿಯ ನಿರೂಪ ಭಂಡಾರಿ ಅಭಿನಯದ ವಿಂಡೋಸೀಟ್ ಚಲನಚಿತ್ರವನ್ನು ಜುಲೈ 1 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು.
ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಂಡೋಸೀಟ್ ರೋಮ್ಯಾಂಟಿಕ್ ಥ್ರಿಲ್ಲರ್ ಚಿತ್ರವಾಗಿದ್ದು, ಇದು ಕೆಎಸ್ಕೆ ಶೋರೀಲ್ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ನಾಯಕಿಯಾಗಿ ಸಂಜನಾ ಆನಂದ್, ಅಮೃತ ಅಯ್ಯಂಗಾರ್, ನಾಯಕನಾಗಿ ನಿರೂಪ್ ಬಂಡಾರಿ ಬಣ್ಣ ಹಚ್ಚಿದ್ದಾರೆ. ಇವರ ಜೊತೆಗೆ ರವಿಶಂಕರ್, ಮಧುಸೂದನ್ ರಾವ್, ಲೇಖ ನಾಯ್ಡು, ಕಾಮಿಡಿ ಕಿಲಾಡಿ ಸೂರಜ್ ಸೇರಿದಂತೆ ಮುಂತಾದವರು ಅಭಿನಯ ಮಾಡಿದ್ದು, ಚಿತ್ರ ಅದ್ಬುತವಾಗಿ ಮೂಡಿಬಂದಿದೆ ಎಂದರು.