ಕರ್ನಾಟಕ

karnataka

ETV Bharat / entertainment

ಸ್ಯಾಂಡಲ್​ವುಡ್​ಗೆ WWE ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿ ಎಂಟ್ರಿ - The Great Khali movie

ಭೂಮಿ ಶೆಟ್ಟಿ, ಮಾಲಾಶ್ರೀ ಮುಖ್ಯ ಭೂಮಿಕೆಯಲ್ಲಿರುವ 'ಕೆಂಡದ ಸೆರಗು' ಸಿನಿಮಾದಲ್ಲಿ ದಿ ಗ್ರೇಟ್ ಖಲಿ ಅಭಿನಯಿಸಲಿದ್ದಾರೆ.

WWE World Champion The Great Khali entry to Sandalwood
ಸ್ಯಾಂಡಲ್​ವುಡ್​ಗೆ ದಿ ಗ್ರೇಟ್ ಖಲಿ ಎಂಟ್ರಿ

By

Published : Mar 4, 2023, 3:07 PM IST

ಕನ್ನಡ ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆಯುತ್ತಿವೆ. ಒಂದೊಳ್ಳೆ ಕಂಟೆಂಟ್​, ಅದ್ಧೂರಿ ಮೇಕಿಂಗ್​, ಸ್ಟಾರ್​ ಕಾಸ್ಟ್, ಪಾತ್ರಧಾರಿಗಳ ನಟನೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ಸಫಲವಾಗುತ್ತಿದೆ. ಪರಭಾಷೆ ಸೆಲೆಬ್ರಿಟಿಗಳು ಕನ್ನಡ ಸಿನಿಮಾದಲ್ಲಿ, ಕನ್ನಡದವರು ಬಹುಭಾಷೆಗಳಲ್ಲಿ ಅಭಿನಯಿಸುವ ಟ್ರೆಂಡ್ ಶುರುವಾಗಿದೆ. ಇದೀಗ ಕೆಂಡದ ಸೆರಗು ಸಿನಿಮಾ ಮೂಲಕ ಸ್ಯಾಂಡಲ್​ವುಡ್ ಎನ್ನುವ ಸಿನಿ ಜಗತ್ತಿಗೆ ವರ್ಲ್ಡ್ ಚಾಂಪಿಯನ್ ಕುಸ್ತಿ ಪಟು ದಿ ಗ್ರೇಟ್ ಖಲಿ ಎಂಟ್ರಿ ಕೊಟ್ಟಿದ್ದಾರೆ.

ಸ್ಯಾಂಡಲ್​ವುಡ್​ಗೆ ದಿ ಗ್ರೇಟ್ ಖಲಿ ಎಂಟ್ರಿ

'ಕೆಂಡದ ಸೆರಗು' ಚಿತ್ರಕ್ಕೆ ದಿ ಗ್ರೇಟ್ ಖಲಿ ಎಂಟ್ರಿ: ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ 'ಕೆಂಡದ ಸೆರಗು'. ಟೀಸರ್ ಮೂಲಕ ಗಮನ ಸೆಳೆಯುತ್ತಿದೆ ಕುಸ್ತಿ ಕುರಿತ ಸಿನಿಮಾ. ಭೂಮಿ ಶೆಟ್ಟಿ, ಮಾಲಾಶ್ರೀ ಮುಖ್ಯ ಭೂಮಿಕೆಯಲ್ಲಿರುವ ಈ 'ಕೆಂಡದ ಸೆರಗು' ಚಿತ್ರಕ್ಕೆ ದಿ ಗ್ರೇಟ್ ಖಲಿ ಎಂಟ್ರಿಯಾಗಿದ್ದಾರೆ.

ಈ ಚಿತ್ರದ ನಿರ್ದೇಶಕ ರಾಕಿ ಸೋಮ್ಲಿ ಅವರೇ ಬರೆದ ಕಾದಂಬರಿ 'ಕೆಂಡದ ಸೆರಗು' ಆಧರಿಸಿದ ಸಿನಿಮಾ ಇದು. ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಈ ಚಿತ್ರ ಕುಸ್ತಿ ಪಟು ಕಥೆ ಹೇಳಲಿದೆ. ಕಮರ್ಶಿಯಲ್ ಎಳೆಯಲ್ಲಿ ಸಿನಿಮಾವನ್ನು ತೆರೆ ಮೇಲೆ ತರಲಾಗುತ್ತಿದೆ. ಇದೀಗ ನಿರ್ದೇಶಕ ರಾಕಿ ಸೋಮ್ಲಿ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿ ಅವರನ್ನು ಚಿತ್ರತಂಡಕ್ಕೆ ಕರೆ ತರುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ನಿರ್ದೇಶಕ ರಾಕಿ ಸೋಮ್ಲಿ ಅವರು ವರ್ಲ್ಡ್ ಚಾಂಪಿಯನ್ ಕುಸ್ತಿ ಪಟು ದಿ ಗ್ರೇಟ್ ಖಲಿ ಅವರನ್ನು ಭೇಟಿ ಮಾಡಿ ಸಿನಿಮಾ ಕಥೆ ಹಾಗೂ ಅವರ ಪಾತ್ರದ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಸಿನಿಮಾ ಬಗ್ಗೆ ಕೇಳಿ ಥ್ರಿಲ್ ಆಗಿರುವ ದಿ ಗ್ರೇಟ್ ಖಲಿ ಈ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ದಿ ಗ್ರೇಟ್​​ ಖಲಿ ಜೊತೆಗಿನ ಫೋಟೋ ಶೇರ್ ಮಾಡಿಕೊಂಡು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ ನಿರ್ದೇಶಕ ರಾಕಿ ಸೋಮ್ಲಿ. ಈ ಮೂಲಕ ಕನ್ನಡ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ದಿ ಗ್ರೇಟ್ ಖಲಿ. ಸದ್ಯದಲ್ಲೇ ಖಲಿ ಅವರು ಚಿತ್ರತಂಡ ಸೇರಿಕೊಳ್ಳಲಿದ್ದು, ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ:ಪವರ್ ಸ್ಟಾರ್ ಯಶಸ್ವಿ ಹಾದಿಯಲ್ಲಿ ಯುವ ರಾಜ್​ಕುಮಾರ್​: ಅಪ್ಪು ಕಾರ್​ ನಂಬರ್​ ಯುವ ಸಿನಿಮಾದಲ್ಲಿ ಬಳಕೆ

ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ. ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ 'ಕೆಂಡದ ಸೆರಗು' ಚಿತ್ರಕ್ಕಿದೆ.

ಇದನ್ನೂ ಓದಿ:1 ಲಕ್ಷ ಮೌಲ್ಯದ ಸೀರೆಯುಟ್ಟು ಅಂದ ಪ್ರದರ್ಶಿಸಿದ ಚೆಲುವೆ ತಮನ್ನಾ ಭಾಟಿಯಾ

ABOUT THE AUTHOR

...view details