ಹೈದರಾಬಾದ್(ತೆಲಂಗಾಣ):ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಸಿನಿಮಾ ಗುರುವಾರ ಪ್ರಪಂಚದಾದ್ಯಂತ ತೆರೆ ಕಾಣಲಿದೆ. ಇದರ ಮಧ್ಯೆ ನಿನ್ನೆ ಹೈದರಾಬಾದ್ನಲ್ಲಿ ಆಯೋಜನೆಗೊಂಡಿದ್ದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ನಟ ಯಶ್ ಮಾಧ್ಯಮದವರ ಮುಂದೆ ಕ್ಷಮೆಯಾಚನೆ ಮಾಡಿದ ಸನ್ನಿವೇಶ ನಡೆಯಿತು. ಕೆಜಿಎಫ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ಹೈದರಾಬಾದ್ನಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿ, ಪತ್ರಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದರು.
ಈ ವೇಳೆ ಮಾತನಾಡಿದ ಯಶ್, 'ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ' ಎಂದರು. ಇಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದ ನಿಖರವಾದ ಸಮಯ ನನಗೆ ಗೊತ್ತಿರಲಿಲ್ಲ. ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಖಾಸಗಿ ಜೆಟ್ನಲ್ಲಿ ಪ್ರಯಾಣಿಸುತ್ತಿರುವ ಕಾರಣ ಇಂದು ಹವಾಮಾನ ವೈಪರೀತ್ಯದಿಂದಾಗಿ ಆಗಮಿಸಲು ಸ್ವಲ್ಪ ತಡವಾಯಿತು ಎಂದು ಸ್ಪಷ್ಟನೆ ಕೊಟ್ಟರು.